ಸಮಾಜದ ಶಾಂತಿಗೆ ಪೊಲೀಸರ ಸೇವೆ ಶ್ಲಾಘನೀಯ: ಎಸ್‌ಪಿ ಡಾ.ಶೋಭಾರಾಣಿ ವಿ.ಜೆ*

0
94
Advertisement

ಬಳ್ಳಾರಿ:ಸಮಾಜದ ಶಾಂತಿಯ ಬದುಕಿಗೆ ಮತ್ತು ಸಾರ್ವಜನಿಕರ ನೆಮ್ಮದಿಗೆ ಪೊಲೀಸರ ಸೇವೆ ಅತ್ಯಂತ ಶ್ಲಾಘನೀಯವಾದದ್ದು. ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿ.ಜೆ.ಶೋಭಾರಾಣಿ ಅವರು ಹೇಳಿದರು.

ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ ಏಕೀಕರಣವಾದ ನಂತರ ಕರ್ನಾಟಕ ಪೊಲೀಸ್ ಪಡೆಯನ್ನು 1965ರ ಏಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಕಾಯ್ದೆಗೆ ಒಳಪಡಿಸಲಾಯಿತು. ಅದರ ಸ್ಮರಣೆಗಾಗಿ ಪ್ರತಿ ವರ್ಷ ಪೊಲೀಸ್ ಧ್ವಜ ದಿನವನ್ನಾಗಿ ರಾಜ್ಯದ ಎಲ್ಲ ಘಟಕಗಳಲ್ಲಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

Advertisement

LEAVE A REPLY

Please enter your comment!
Please enter your name here