BP NEWS: ಬಳ್ಳಾರಿ: ಜೂನ್.25: ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ 75ನೇ ಸ್ವಾತಂತ್ರೋತ್ಸವದ ನಿಮಿತ್ತ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಅಂಗವಾಗಿ ಶನಿವಾರ ಸಂಜೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಡೊಳ್ಳು ವಾದ್ಯ ಬಾರಿಸುವ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಹಗಲುವೇಷ, ಹಲಗೆ ವಾದ್ಯ, ನಂದಿಕೋಲು, ವೀರಗಾಸೆ, ಡೊಳ್ಳು ವಾದ್ಯ, ಗೊರವರ ಕುಣಿತ, ತಾಷೆರಾಂ ಡೋಲು, ಸಿಂಧುವಾಳ ಕುಣಿತ, ಸಮಾಳ ಹಾಗೂ ಕಹಳೆ ವಾದ್ಯ ಸೇರಿದಂತೆ ವಿವಿಧ ಕಲಾತಂಡಗಳ ಪ್ರದರ್ಶನ ಮೆರವಣಿಗೆಯಲ್ಲಿ ಗಮನಸೆಳೆಯಿತು.
500ಕ್ಕೂ ಹೆಚ್ಚು ಮಹಿಳೆಯರು ಕುಂಭಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ಕಂಡುಬಂದಿತು. ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿದ್ದ ಚಿಣ್ಣರು ಟ್ರ್ಯಾಕ್ಟರ್‍ನಲ್ಲಿ ಗಂಭೀರವಾಗಿ ಕುಳಿತು ಮೆರವಣಿಗೆಯಲ್ಲಿ ಸಾಗಿದರು. ಸ್ವಾತಂತ್ರ್ಯ ಸಂದೇಶ ಸಾರುವ ವಿವಿಧ ಫಲಕಗಳು ಹಾಗೂ ಘೋಷಣೆಗಳು ಗಮನಸೆಳೆದವು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ,ಸಾರ್ವಜನಿಕರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು
ಈ ಭವ್ಯ ಮೆರವಣಿಗೆಯು ಎಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭವಾಗಿ ತೇರು ಬೀದಿಯ ಮೂಲಕ ಹಳೇ ಬ್ರೂಸ್‍ಪೇಟೆ ಪೆÇಲೀಸ್ ಠಾಣೆ ಹಾಗೂ ಬೆಂಗಳೂರು ರಸ್ತೆ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮುನಿಸಿಪಲ್ ಮೈದಾನದವರೆಗೆ ಸಾಗಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ ರಂಗಣ್ಣವರ, ರಾಬಕೋವಿ ಹಾಲು ಒಕ್ಕೂಟದ ನಿರ್ದೇಶಕರಾದ ವೀರಶೇಖರ್‍ರೆಡ್ಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರೆಹಮತ್ ಉಲ್ಲಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.