BP NEWS: ಬಳ್ಳಾರಿ: ಜುಲೈ.04: ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಬಳ್ಳಾರಿ ಸಂಸ್ಥೆಯು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕರು/ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.
ಪ್ರವೇಶಾತಿಗೆ ಕೊನೆಯ ದಿನಾಂಕ ಆ.06 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಮೊದಲನೇಯ ರೈಲ್ವೇ ಗೇಟ್ ಹತ್ತಿರ, ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಮೊ:9845715502 ಹಾಗೂ ಬೋಧಕ ಸಿಬ್ಬಂದಿಗಳ ಮೊ:9741264655, 9844862576, 9844474235, 8123126127, 8277477912 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.