BP NEWS: ರಾಯಚೂರು: ಜುಲೈ.06: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಾನುವಾರುಗಳ ಹತ್ಯೆ ಹಾಗೂ ಸಾಗಾಣಿಕೆಯನ್ನು ಮಾಡಬಾರದು. ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಜು.06ರ ಬುಧವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಿಸುವ ನಿಟ್ಟಿನಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಪೊಲೀಸ್ ಇಲಾಖೆ, ಪಶುಸಂಗೋಪನಾ ಇಲಾಖೆ, ಸಾರಿಗೆ ಇಲಾಖೆ, ಮಹಾ ನಗರ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಮುಂಚಿತವಾಗಿ ಜಾನುವಾರುಗಳ ಸಾಗಾಣಿಕೆ ಬಗ್ಗೆ ಕಣ್ಗಾವಲು ಇಡಬೇಕು. ಕರ್ನಾಟಕದಲ್ಲಿ ಜಾರಿಯಲ್ಲಿರುವ ಕರ್ನಾಟಕ ಜಾನುವಾರು ವಧೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ-2020ಅನ್ನು ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಹಿಂದೂ, ಮುಸ್ಲಿಂ ಎನ್ನದೆ ಧಾರ್ಮಿಕ ಹಬ್ಬಗಳನ್ನು ಎಲ್ಲರ ಸಮ್ಮೂಖದಲ್ಲಿ ಅನೊನ್ಯವಾಗಿ ಸರಳ ಮತ್ತು ಶಾಂತಿಯುತವಾಗಿ ಆಚರಣೆ ಮಾಡಲು ಅಗತ್ಯ ಕ್ರಮವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೊಲೀಸ್ ಇಲಾಖೆ, ಕಂದಾಯ, ಸಾರಿಗೆ ಇಲಾಖೆ, ನಗರಸಭೆ ಸೇರಿದಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು, ಜಿಲ್ಲೆಯ ಹೊರಭಾಗದಲ್ಲಿರುವ ಗಡಿ ಪ್ರದೇಶದಲ್ಲಿ ಚೆಕ್ ಪೋಸ್ಟ್ಗಳನ್ನು ರಚಿಸಿ ಗೋವು ಸಾಗಾಣಿಕೆ ಯಾಗದಂತೆ ನಿಯಂತ್ರಿಸಬೇಕು ಎಂದರು.
ಒAದು ವೇಳೆ ಅಂತಹ ಘಟನೆಗಳು ಕಂಡು ಬಂದಲ್ಲಿ ಕೂಡಲೆ ಪೊಲೀಸ್ ಇಲಾಖೆಗೆ ದೂರ ನೀಡಬೇಕು. ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಯಾವುದೇ ಜಾತಿ ಪಂಥ ಎನ್ನದೆ ಶಾಂತಿ ಸುವ್ಯವಸ್ಥೆಯಿಂದ ಸರಳವಾಗಿ ಆಚರಣೆ ಮಾಡಿ ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಮಾತನಾಡಿ, ಇಂದಿನಿAದ ಜು.10ರವರೆಗೆ ಎಲ್ಲಾ ತಾಲ್ಲೂಕಗಳಲ್ಲಿ ನಡೆಯುವ ದನ ಸಂತೆಗಳಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಎ.ಪಿ.ಎಂ.ಸಿ ಇಲಾಖೆಯವರು ಮತ್ತು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸಂತೆಯಲ್ಲಿ ಇದ್ದು, ಸಂತೆ ಮುಗಿಯವವರೆಗೆ ನಿಗಾವಹಿಸಲು ಸೂಚಿಸಿದರು.
ವಿಶೇಷವಾಗಿ ಜಿಲ್ಲೆಯ ಸಿಂಧನೂರು, ದೇವದುರ್ಗ ಮತ್ತು ಲಿಂಗಸೂಗೂರು ತಾಲ್ಲೂಕುಗಳಲ್ಲಿ ಹೆಚ್ಚಿನ ನಿಗಾವಹಿಸಲು ಈಗಾಗಲೇ ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ 14 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದರು.
ಕಾನೂನು ಬದ್ದವಾದ ಕಸಾಯಿ ಖಾನೆಗಳಲ್ಲಿ ಪ್ರಾಣಿ ವಧೆ ಮಾಡುವ ಬಗ್ಗೆ ಕಾನೂನು ಬದ್ದವಲ್ಲದ ಕಸಾಯಿ ಖಾನೆಗಳಲ್ಲಿ ಪ್ರಾಣಿ ವಧೆ ಕುರಿತು ಸೂಕ್ತ ನಿಗಾವಾಹಿಸಲಾಗುತ್ತದೆ. ಅಲ್ಲದೆ ಕೆಲವು ಕಡೆ ಮಾಂಸ ಸಾಗಾಣಿಕೆ ಮಾಡುವರು ಈ ಬಗ್ಗೆ ಬೆಂಗಳೂರಿನಲ್ಲಿ 4ರಿಂದ5 ಎನ್.ಜಿ.ಓಗಳು ವಾಚ್ ಮಾಡಿ ಕ್ರಮಕೈಗೊಳ್ಳಲು ಫೋನ್ ಮೂಲಕ ತಿಳಿಸಿದ್ದು, ಪೊಲೀಸ್ ಅಧಿಕಾರಿಗಳು ಚೆಕ್ ಪೊಸ್ಟ್ಗೆ ಹೋಗಿ ಸಹಿ ಮಾಡಿ ಕಾರ್ಯನಿರ್ವಹಿಸಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ್ ಕಾಟೋಕರ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ, ನಗರಸಭೆಯ ಪೌರಾಯುಕ್ತ ಗುರುಲಿಂಗಪ್ಪ, ಪರಿಸರ ಕರ್ನಾಟಕ ಮಾಲಿನ್ಯ ನಿಯಂತ್ರಣ ಅಧಿಕಾರಿ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.