BP NEWS: ರಾಯಚೂರು: ಜುಲೈ.08: ವಿವಿಧ ಅಧಿಕಾರಿಗಳ ಸಹಕಾರದೊಂದಿಗೆ ಅತಿ ಶೀಘ್ರದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯ ಶಂಕುಸ್ಥಾಪನೆಗೆ ಕ್ರಮ ವಹಿಸಲಾಗುತ್ತೆದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಡಾ.ಶೈಲೇಂದ್ರ ಕೆ.ಬಿಲ್ದಾಳೆ ಅವರು ಹೇಳಿದರು.
ಅವರು ಜು.8ರ ಶುಕ್ರವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತನಾಡಿದರು.
ರಾಯಚೂರು ಜಿಲ್ಲೆಗೆ ತನ್ನದೆಯಾದ ಒಂದು ಸಾಂಸ್ಕೃತಿಕ ಮತ್ತು ಭಾವನಾತ್ಮಕ ಇತಿಹಾಸವಿದೆ. ಭತ್ತದ ನಾಡು ಎನ್ನುವ ಖ್ಯಾತಿಯನ್ನು ಪಡೆದುಕೊಂಡಿದೆ. ಇಂತಹ ಜಿಲ್ಲೆಗೆ ವಿಮಾನ ನಿಲ್ದಾಣ ಮಾಡುವುದು ನಮ್ಮ ಸರಕಾರದ ಕನಸು ಕೂಡ ಆಗಿದೆ ಎಂದರು.
ತಾಲೂಕಿನ ಏಗನೂರು, ಯರಮರಸ್ ಹಾಗೂ ದಂಡು ಗ್ರಾಮದ ಗ್ರಾಮಸ್ಥರೆಲ್ಲರನ್ನು ಕರೆಸಿ ಕೂಡಲೇ ಸಂಬAಧಿಸಿದ ಅಧಿಕಾರಿಗಳು ಮನವೋಲಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ವಿಮಾನ ನಿಲ್ದಾಣದ ಸರಹದ್ದಿನ (ಬಾರ್ಡರ್) ಒಳಗಡೆ ಇರುವಂತ ಗ್ರಾಮಗಳ ಸ್ಥಳಾಂತರಕ್ಕೆ ಮುಂದಾಗಬೇಕು. ಸರಕಾರ ರೈತರಿಗೆ ಮತ್ತು ಬಡವರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಸ್ಪಂದಿಸಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಜೆಸ್ಕಾಂ ಅಧಿಕಾರಿಗಳು ವಿಮಾನ ನಿಲ್ದಾಣ ಜಾಗದ ಒಳ ಹಾದು ಹೋಗಿರುವ ವಿದ್ಯುತ್ ಲೈನ್‌ಗಳನ್ನು ಕೂಡಲೇ ಬೇರೆ ಮಾರ್ಗದ ಮೂಲಕ ಸ್ಥಳಾಂತರಿಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಯಾವುದೇ ರೀತಿಯ ವಿದ್ಯುತ್ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಮಾನ ನಿಲ್ದಾಣದಲ್ಲಿ ದಿನದ 24ಗಂಟೆ ವಿದ್ಯುತ್ ಹಾಗೂ ನೀರು ಬೇಕಾಗಿರುತ್ತದೆ ಹಾಗಾಗಿ ಜೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳು ಈಗಿನಿಂದಲೇ ವಿದ್ಯುತ್ ಮತ್ತು ನೀರಿನ ಪೂರೈಕೆ ಕಡಿಮೆಯಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ಹವಾಯಿ ಚಪ್ಪಲ್ ಪೇನೆವಾಲಾ ಬಿ, ಹವಾಯಿ ಜಾಜ್ ಪರ್ ಜಾನೆವಾಲಾ ಹೈ ಎನ್ನುವಂತೆ ಸಾಮಾನ್ಯ ವ್ಯಕ್ತಿಯು ವಿಮಾನದಲ್ಲಿ ಹಾರುವ ಕನಸು ನನಸಾಗಿಸಲು ರಾಯಚೂರು ಜಿಲ್ಲೆಗೆ ವಿಮಾನ ನಿಲ್ದಾಣದ ಕನಸು ನನಸು ಮಾಡಲು ರಾಜ್ಯ ಸರಕಾರ ಸದಾ ಸಿದ್ದವಿದ್ದು, ಜಾಗ ಒತ್ತುವರಿ ಸಮಸ್ಯೆ ಬಿಟ್ಟರೆ ಬೇರೆ ಯಾವ ಸಮಸ್ಯೆ ಇಲ್ಲ ಕೂಡಲೇ ಎಲ್ಲವನ್ನು ಇತ್ಯಾರ್ಥ ಮಾಡಿ ಟೆಂಡರ್ ಕರೆದು ಒಂದು ತಿಂಗಳ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿಯನ್ನು ರಾಜ್ಯದ ಮುಖ್ಯಮಂತ್ರಿ ಅವರನ್ನು ಕರೆಸಿ ಅಡಿಗಲ್ಲು ಮಾಡಲು ಪ್ರಯತ್ನಿಸುತ್ತೇವೆ. ಇದಕ್ಕೆ ಸ್ಥಳೀಯ ಜನ ಪ್ರತಿನಿಧಿಗಳು, ಸಂಘ, ಸಂಸ್ಥೆಗಳು, ಅಧಿಕಾರಿಗಳು ಸಹಕಾರ ಅಗತ್ಯವಾಗಿದೆ. ಇನ್ನು ಒಂದುವರೆ ವರ್ಷದಲ್ಲಿ ವಿಮಾನ ನಿಲ್ದಾಣ ಸಿದ್ದತೆಯಲ್ಲಿರಲಿದೆ ಎಂದರು.
ವಿಮಾನ ನಿಲ್ದಾಣದ ಸ್ಥಳ ವೀಕ್ಷಣೆ: ನಗರದ ಹೊರವಲಯದ ಏಗನೂರು ಹಾಗೂ ಯರಮರಸ್ ಹತ್ತಿರವಿರುವ ವಿಮಾನ ನಿಲ್ದಾಣದ ಸ್ಥಳವನ್ನು ವೀಕ್ಷಣೆ ಮಾಡಿ, ವಿಮಾನ ನಿಲ್ದಾಣ ಕಾಮಗಾರಿಗೆ ಬೇಕಾಗುವ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳು ಸೂಚನೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದ ಎಂ.ಡಿ ಡಾ.ಎಂ.ಆರ್.ರವಿ, ಬ್ರೀಗೆಡಿಯರ್ ಪೂರ್ವಿಮಠ, ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತ ರಜನಿಕಾಂತ್, ಜಿಲ್ಲಾ ಭೂದಾಖಲೆಗಳ ಇಲಾಖೆಯ ಉಪ ನಿರ್ದೇಶಕಿ ರೇಷ್ಮ ಪಾಟೀಲ್, ಕೃಷಿ ಇಲಾಖೆ ಅಧಿಕಾರಿ ನಹಿಂ ಉದೀನ್, ಜಿಲ್ಲಾ ವಾಣಿಜ್ಯೋದ್ಯಮ ಮಂಡಳಿಯ ಅಧ್ಯಕ್ಷ ತ್ರಿವಿಕ್ರಮ್ ಜ್ಯೋಷಿ, ಪಿಡ್ಬೂ÷್ಲಡಿ ಇಲಾಖೆ ಮಹೇಶ, ರಾಯಚುರು ತಾಲೂಕ ತಹಶೀಲ್ದಾರ್ ರಾಜಶೇಖರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.