ಸಾಲ ಸೌಲಭ್ಯ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ: ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್

0
123

BP NEWS: ರಾಯಚೂರು: ಜುಲೈ.12: ಜಿಲ್ಲೆಯಲ್ಲಿ ಕೊರೊನಾ ಸಂಕಷ್ಟದ ಸಮಯದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಸ್ವನಿಧಿ ಸಾಲ ಸೌಲಭ್ಯ ಯೋಜನೆಯನ್ನು ನಗರದ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಹೆಚ್ಚಿನ ಮಟ್ಟದಲ್ಲಿ ಶ್ರಮವಹಿಸಿಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜು.12ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಉತ್ತೇಜನ ನೀಡುವ ಸಲುವಾಗಿ ಜಾರಿಗೆ ಬಂದಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುರುತಿನ ಚೀಟಿ ಪಡೆದವರಿಗೆ ಸಾಲ ನೀಡಲು ಅಗತ್ಯ ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಡಿಜಿಟಲ್ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಪ್ರತಿ ತಿಂಗಳು 50ರಿಂದ 100ರೂ.ಗಳವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಹೀಗಾಗಿ ಹೆಚ್ಚಿನ ಮಟ್ಟದಲ್ಲಿ ವ್ಯಾಪಾರಿಗಳಿಗೆ ಡಿಜಿಟಲ್ ವಹಿವಾಟು ಮಾಡುವಂತೆ ಜಾಗೃತಿ ಮೂಡಿಸುವ ಕೆಲಸವಾಗ ಅಲ್ಲದೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವುದರಲ್ಲಿ ಜಿಲ್ಲೆಗೆ ಉತ್ತರ ಸ್ಥಾನ ಬರುವಂತೆ ಮಾಡಬೇಕೆಂದರು.

ಡೇ-ನಲ್ಮ್ ಯೋಜನೆಯಡಿಯಲ್ಲಿ ನಗರದ ಬಡಜನರ ಜೀವನೋಪಾಯಕ್ಕಾಗಿ ಸಾಲ ಸೌಲಭ್ಯ ನೀಡದೆ. ಫಲಾನುಭವಿಗಳು ಪದೆ ಪದೆ ಬ್ಯಾಂಕಿಗೆ ಅಲೆದಾಡದಂತೆ ತ್ವರಿತವಾಗಿ ಸಾಲ ಮಂಜೂರು ಮಾಡಿ, ಅವರ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಂಡಬೇಕು ಎಂದು ಸಲಹೆ ನೀಡಿದರು.

ಬ್ಯಾಂಕ್‌ಗಳು ಸರ್ಕಾರದ ಯೋಜನೆಗಳ ಅನುಷ್ಠಾನಲ್ಲಿ ತ್ವರಿತವಾಗಿ ಸಾಲ ನೀಡಿದಲ್ಲಿ ನಿರುದ್ಯೋಗಿ ಯುವ ಸಮೂಹ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ. ಇದರಿಂದ ಆತನ ಕುಟುಂಬ ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತದೆ ಎಂದರು.

ಬ್ಯಾAಕ್ ಅಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಆಯ್ಕೆಯಾದ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು. ಇದರಿಂದ ಸರ್ಕಾರ ರೂಪಿಸುವ ಸಾಲ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ನಗರಸಭೆಯ ಪೌರಾಯುಕ್ತ ಗುರುಲಿಂಗಪ್ಪ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಅರುಣ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ದೇವದುರ್ಗ ಪುರಸಭೆಯ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಮನಿ, ರಾಯಚೂರು ನಗರಸಭೆಯ ಸಂಘಟನಾ ಅಧಿಕಾರಿ ಕೃಷ್ಣ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here