ರಾಯಚೂರು ಜಿಲ್ಲಾಡಳಿತದಿಂದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ

0
108

BP NEWS: ರಾಯಚೂರು: ಜುಲೈ.13:  ಅಪ್ಪಣ್ಣನವರ ವಚನದ ಪುಸ್ತಕಗಳನ್ನು ನಿತ್ಯವೂ ಮಕ್ಕಳಿಗೆ ಓದಿಸಬೇಕು. ಅಂದಾಗ ಅಪ್ಪಣ್ಣನವರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಹೇಳಿದರು.

ಅವರು ಜು.13ರ ಬುಧವಾರ ದಂದು ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಡೋಹರ ಡಕ್ಕಯ್ಯ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆಯ ಮಾರಯ್ಯ, ಮೇಧಾರ ಕೇತಯ್ಯ, ಸಮಗಾರ ಹರಳಯ್ಯ, ಸೊನ್ನಲಗದ ಸಿದ್ದರಾಮ ಸೇರಿದಂತೆ ಜಗತ್ತಿನ ಎಲ್ಲ ಧರ್ಮದ ಶರಣರಿಗೆ ಬಸವಣ್ಣನವರು 12ನೇ ಶತಮಾನದ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದ್ದರು. ಅಣ್ಣ ಬಸವಣ್ಣನವರು ಅಪ್ಪಣ್ಣನವರನ್ನು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ಮಾಡಿಕೊಳ್ಳುವ ಮೂಲಕ ತಮ್ಮನ್ನು ನೋಡಲು ಬರುವವರೆಲ್ಲರೂ ಮೊದಲು ಅಪ್ಪಣ್ಣನವರನ್ನು ಭೇಟಿ ಮಾಡಿ ಬರುವಂತೆ ಮಾಡಿದ್ದರು ಎಂದರು.

ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿದ್ದರು. ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದರು. ಅವರು ರಚಿಸಿದ್ದ 200ಕ್ಕೂ ಹೆಚ್ಚು ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ಈ ವೇಳೆ ಜಿಲ್ಲೆಯ ಮಸ್ಕಿ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಉಪನ್ಯಾಸಕ ಸುರೇಶ್ ಬಳಗಾನೂರ ಅವರು ಹಡಪದ ಅಪ್ಪಣ್ಣನವರ ಕುರಿತು ಉಪನ್ಯಾಸವನ್ನು ನೀಡಿ, ಮಾತನಾಡಿದರು ಹಡಪದ ಅಪ್ಪಣ್ಣ ಜಾತಿ, ಧರ್ಮ, ವರ್ಣ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ಮುಂದಾದ ಮಹಾನ್ ವ್ಯಕ್ತಿ. ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕೆಲ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಶ್ರಮಿಸಿದವರು. ತಮ್ಮ ವಚನಗಳ ಮೂಲಕವೂ ಉತ್ತಮ ಸಮಾಜ ನಿರ್ಮಾಣ ಮಾಡಿದ ಅವರು ಸದಾ ಸ್ಮರಣೀಯರು ಎಂದು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ, ರಾಯಚೂರು ಡಿವೈಎಸ್ಪಿ ವೆಂಕಟೇಶ ಸೇರಿದಂತೆ ಸಮಾಜದ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು ಹಾಗೂ ರಾಯಚೂರು ತಾಲೂಕು ಘಟಕ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಇದ್ದರು.

LEAVE A REPLY

Please enter your comment!
Please enter your name here