ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಿಂದ ಮತ್ಸಾಲಯ ಉದ್ಘಾಟನೆ.

0
119

BP NEWS: ರಾಯಚೂರು: ಜುಲೈ.14: ನಗರದ ಮಾವಿನಕೆರೆ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ನಗರಸಭೆ ಹಾಗೂ ಮೀನುಗಾರಿಕೆ ಇಲಾಖೆಯ ಮೀನುಗಾರಿಕೆ ಕಟ್ಟಡಗಳು, ಸೌಲಭ್ಯಗಳ ನಿರ್ಮಾಣ ಮತ್ತು ನಿರ್ವಹಣೆ ಯೋಜನೆ ಹಾಗೂ ಜಿಲ್ಲಾ ಪಂಚಾಯತಿಯ 15ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ಸರ್ಕಾರಿ ಮತ್ಸಾಲಯ ಉದ್ಘಾಟನೆಯನ್ನು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ್ ಮುನೇನಕೊಪ್ಪ ಅವರು ನೇರವೆರಿಸಿದರು.

ಸರ್ಕಾರಿ ಮತ್ಸಾಲಯವು 102.50ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಸರಿಯಾಗಿ ಬಳಕೆ ಮಾಡುವಂತೆ ಸಚಿವರು ಸೂಚನೆ ನೀಡಿದರು.

ವಿವಿಧ ನೀರಿನ ಟ್ಯಾಂಕ್‌ಗಳ ವೀಕ್ಷಣೆ: ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ್ ಮುನೇನಕೊಪ್ಪ ಅವರು ನಗರದ ವಿವಿಧ ನೀರಿನ ಟ್ಯಾಂಕ್‌ಗಳನ್ನು ವೀಕ್ಷಣೆ ಮಾಡಿ, ಪರಿಶೀಲನೆ ಮಾಡಿದರು.

ನಗರದ ಜ್ಯೋತಿ ಕಾಲೋನಿ ಹಾಗೂ ಗಂಗಾ ನಿವಾಸಿ ಕಾಲೋನಿಯ ನೀರಿನ ಟ್ಯಾಂಕ್‌ಗಳನ್ನು ವೀಕ್ಷಣೆ ಮಾಡಿ, ರಾಯಚೂರು ನಗರದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ನಗರಸಭೆಯ ಸದಸ್ಯ ರಮೇಶ್, ಕರ್ನಾಟಕ ಸಹಕಾರ ಮೀನುಗಾರಿಕೆ ಮಹಾಮಂಡಳಿ ನಿರ್ದೇಶಕ ಸೈಯ್ಯದ್ ಮನ್ಸಲಾಪುರ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹರಾ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ರಾಯಚೂರು ತಹಸೀಲ್ದಾರ್ ರಾಜಶೇಖರ, ಮುಖ್ಯ ಲೆಕ್ಕಾಧಿಕಾರಿ ನಾಗರಾಜ ನಾಯಕ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಶರಣಬಸವ, ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶರಣಬಸ್ಸಪ್ಪ ಪಟ್ಟೆದ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.

LEAVE A REPLY

Please enter your comment!
Please enter your name here