BP NEWS: ಬಳ್ಳಾರಿ: ಜುಲೈ.30: ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಜಿಲ್ಲಾಧಿಕಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳ ಜೊತೆಗೂಡಿ ಬಳ್ಳಾರಿ ನಗರ ಪ್ರದಕ್ಷಿಣೆ ನಡೆಸಿದರು.
ನಗರದ ಮುನ್ಸಿಪಲ್ ಹೈಸ್ಕೂಲ್‍ಗೆ ಭೇಟಿ ನೀಡಿ ಹೈಸ್ಕೂಲ್ ಕಟ್ಟಡಗಳನ್ನು ಪರಿಶೀಲಿಸಿದರು ಮತ್ತು ಶಾಲಾ ಕೊಠಡಿಗಳು ಹಾಗೂ ಶಾಲಾ ಮಕ್ಕಳು ಕುಳಿತುಕೊಳ್ಳುತ್ತಿದ್ದ ಬೆಂಚ್ ಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳು ಅಹವಾಲುಗಳನ್ನು ಆಲಿಸಿದರು.
ತಾರಾನಾಥ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸವನಕುಂಟೆ ಕೆರೆಯಲ್ಲಿನ ಮಲೀನನೀರು ತೆಗೆದು ಅದನ್ನು ಸಂಪೂರ್ಣವಾಗಿ ಮುಚ್ಚಿ, ಅದನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ ವಾಕಿಂಗ್‍ಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು.
ಅದೇ ರೀತಿಯಲ್ಲಿ ಕಾರ್ಕಲಕುಂಟ ಕೆರೆಗೂ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿಪಡಿಸಲು ತಿಳಿಸಿದರು.
ಶಿವಲಿಂಗ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿ ಚರಂಡಿ ಸ್ವಚ್ಛತೆ ಸೇರಿದಂತೆ ಈ ಪ್ರದೇಶ ಸಂಪೂರ್ಣ ಸ್ವಚ್ಛಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ತಿಳಿಸಿದರು.
ಪಾರ್ವತಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಕಂಪೌಂಡ್, ಶಾಲಾ ಕಟ್ಟಡ ಪರಿಶೀಲಿಸಿ ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಮಾಜಿ ಸಂಸದರಾದ ಜೆ.ಶಾಂತಾ, ಬುಡಾ ಅಧ್ಯಕ್ಷ ಪಾಲನ್ನ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಸೇರಿದಂತೆ ಅಧಿಕಾರಿಗಳು,ಮುಖಂಡರು ಇದ್ದರು.