ಬಳ್ಳಾರಿಯಲ್ಲಿ 5ಕೋಟಿ ರೂ.ವೆಚ್ಚದ ನೂತನ ವಿವಿಐಪಿ ಗೆಸ್ಟ್ ಹೌಸ್ ಲೋಕಾರ್ಪಣೆ

0
122

BP NEWS: ಬಳ್ಳಾರಿ: ಆಗಸ್ಟ್.04: ಬಳ್ಳಾರಿ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 1ವರ್ಷದಲ್ಲಿ 124ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಇನ್ನೂ 5-6ತಿಂಗಳಲ್ಲಿ ಜಿಲ್ಲೆಯ ರಸ್ತೆಜಾಲಗಳನ್ನು ಗಣನೀಯ ಪ್ರಮಾಣದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರು ಹೇಳಿದರು.
ನಗರದ ಸರಕಾರಿ ಅತಿಥಿಗೃಹದ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 5ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ವಿವಿಐಪಿ ಗೆಸ್ಟ್ ಹೌಸ್ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಒಂದು ವರ್ಷದಲ್ಲಿ ಬಳ್ಳಾರಿ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 124 ಕೋಟಿ ರೂ.,ಕಟ್ಟಡಗಳಿಗಾಗಿ 15ಕೋಟಿ ರೂ.,5ಕೋಟಿ ರೂ ಅತಿಥಿಗೃಹ ಮತ್ತು 8 ಕೋಟಿ ರೂ.ಇತರೇ ಅಭಿವೃದ್ಧಿ ಕಾರ್ಯಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ ಸಚಿವ ಸಿ.ಸಿ.ಪಾಟೀಲ್ ಅವರು ಬಳ್ಳಾರಿಯಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣಕ್ಕೆ ಹೆಚ್ಚುವರಿಯಾಗಿ 112ಕೋಟಿ ರೂ. ಕೇಳಲಾಗಿದ್ದು,ಇತ್ತೀಚೆಗೆ ಕ್ಯಾಬಿನೆಟ್ ನಲ್ಲಿಯೂ ಚರ್ಚಿಸಿ ರಿಕನ್ಸಡಿರೇಶನ್ ಗೆ ವಾಪಸ್ ಕಳುಹಿಸಲಾಗಿದ್ದು,ಇದಕ್ಕೂ ಅಗತ್ಯ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಕ್ಷಬೇಧ ಮಾಡದೇ ಹಣಕಾಸಿನ ಇತಿಮಿತಿಯಲ್ಲಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವ ಪಾಟೀಲ್ ಅವರು ಒಂದು ಬಾರಿ ನಿರ್ಮಿಸಿದ ರಸ್ತೆ ಕನಿಷ್ಠವೆಂದರೂ 10ರಿಂದ 15ವರ್ಷ ಉಳಿಯಬೇಕು;ನಿಗದಿಪಡಿಸಿದ ನಿಯನಗಳನ್ವಯ ರೂಪಿಸಬೇಕು ಎಂದರು.


ಪಾರಂಪರಿಕ ಅತಿಥಿಗೃಹ ನವೀಕರಣಕ್ಕೆ 5ಕೋಟಿ ರೂ.ಬಿಡುಗಡೆ: ಜಿಲ್ಲೆಯಲ್ಲಿರುವ ಪಾರಂಪರಿಕ ಕಟ್ಟಡವನ್ನು ನವೀಕರಣಗೊಳಿಸಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ 5ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನೂತನ ವಿವಿಐಪಿ ಕಟ್ಟಡ ನಿರ್ಮಿಸಲಾಗಿದ್ದು, ಪಾರಂಪರಿಕ ಅತಿಥಿಗೃಹವನ್ನು ಅಭಿವೃದ್ಧಿಪಡಿಸಬೇಕು ಎಂದು ಕೋರಿದ ಹಿನ್ನೆಲೆ ಸಚಿವ ಪಾಟೀಲ್ ಅವರು ಘೋಷಣೆ ಮಾಡಿದರು.
ಬಿಜೆಪಿ ಸರಕಾರಕ್ಕೂ ಮಳೆಗಾಲಕ್ಕೂ ವಿಶೇಷ ನಂಟಿದೆ ಎಂದು ಹೇಳಿದ ಸಚಿವ ಪಾಟೀಲ್ ಅವರು ಮಳೆ-ಚಳಿ,ರೋಗ-ರುಜೀನ ಎಲ್ಲವೂಗಳು ನಮ್ಮ ಅವಧಿಯಲ್ಲಿಯೇ ಬರತಾವೆ;ಅವುಗಳನ್ನು ಎದುರಿಸಿ ಉತ್ತಮ ಆಡಳಿತ ನೀಡಬೇಕು; ಅದನ್ನು ನಮ್ಮ ಸರಕಾರ ಸಮರ್ಪಕವಾಗಿ ನೀಡುತ್ತಿದೆ ಎಂದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ವಿವಿಧ ಯೋಜನೆಗಳನ್ನು ಅನುμÁ್ಠನಗೊಳಿಸುವುದರ ಮೂಲಕ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಲೋಕೋಪಯೋಗಿ ಇಲಾಖೆ ವತಿಯಿಂದ ಕಳೆದ ಒಂದು ವರ್ಷದಲ್ಲಿ 4040ಕಿ.ಮೀ ಹೆದ್ದಾರಿಗಳನ್ನು, 2338ಜಿಲ್ಲಾ ಪ್ರಮುಖ ರಸ್ತೆಗಳನ್ನು ನಿರ್ಮಿಸಲಾಗಿದೆ. ಎಸ್‍ಎಚ್ಡಿಪಿ ಅಡಿ 3350 ಕೋಟಿ ರೂ.ವೆಚ್ಚದಲ್ಲಿ 2275 ಕಿ.ಮೀ ರಸ್ತೆ ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.


3900ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸಿ.ಸಿ.ಪಾಟೀಲ್ ಅವರು ಲೋಕೋಪಯೋಗಿ ಇಲಾಖೆ ಸಚಿವರಾದ ನಂತರ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕೆಲಸಗಳು ಭರದಿಂದ ಸಾಗಿವೆ ಎಂದರು.
ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಕಾರ್ಯವೈಖರಿಯನ್ನು ಬಣ್ಣಿಸಿದ ಸಚಿವ ಪಾಟೀಲ್ ಅವರು ಜಿಲ್ಲೆಗೆ 176 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದಾರೆ ಮತ್ತು ಬಹುದಿನಗಳ ಬೇಡಿಕೆಯಾಗಿದ್ದ ಕಂಪ್ಲಿ-ಗಂಗಾವತಿ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 79ಕೋಟಿ ರೂ.ಅನುದಾನ ಒದಗಿಸಿದ್ದಾರೆ. ಬಳ್ಳಾರಿ-ಚೆಳಗುರ್ಕಿ ಯರ್ರಿತಾತ ದೇವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ 7.90ಕೋಟಿ ರೂ., ಬಳ್ಳಾರಿ ಟವರ್ ನಿರ್ಮಾಣ ಕಾಮಗಾರಿಗೆ 7ಕೋಟಿ ರೂ. ಒದಗಿಸಿದ್ದಾರೆ ಎಂದರು.
ಬಳ್ಳಾರಿ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಬದ್ಧವಾಗಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಮಾತನಾಡಿದರು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಆದ್ಯಕ್ಷ ಉಮೇಶ, ಮಾಜಿ ಸಂಸದರಾದ ಜೆ.ಶಾಂತಾ, ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳ ಮುಖ್ಯ ಎಂಜಿನಿಯರ್ ಜಗನ್ನಾಥ ಹಲಿಂಗೆ, ಲೋಕೋಪಯೋಗಿ ಇಲಾಖೆಯ ಬಳ್ಳಾರಿ ವೃತ್ತದ ಅಧೀಕ್ಷಕ ಮಲ್ಲಿಕಾರ್ಜುನ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಸ್ಪಿ ಸೈದುಲು ಅಡಾವತ್, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್.ಎಸ್.ಪೂಜಾರಿ, ತಹಸೀಲ್ದಾರ್ ವಿಶ್ವನಾಥ, ಮಹಾನಗರ ಪಾಲಿಕೆಯ ಸದಸ್ಯರುಗಳು ಸೇರಿದಂತೆ ಮತ್ತಿತರರು ಇದ್ದರು.
ಬಳ್ಳಾರಿ ನಗರದ ತಾಳೂರು ರಸ್ತೆ ಕಾಮಗಾರಿ ಪರಿಶೀಲನೆ: ಬಳ್ಳಾರಿ ನಗರದ ತಾಳೂರು ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.


ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ,ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಅಧ್ಯಕ್ಷ ಉಮೇಶ, ಮಾಜಿ ಸಂಸದೆ ಜೆ.ಶಾಂತಾ, ಎಸ್ಪಿ ಸೈದುಲು ಅಡಾವತ್, ಎಸಿ ಡಾ.ಆಕಾಶ ಶಂಕರ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಇದ್ದರು.

LEAVE A REPLY

Please enter your comment!
Please enter your name here