BP News Karnataka Super Fast 10-08-2022

0
142

ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಬೃಹತ್ ಜಾಥಾ: ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್


BP News ಹೊಸಪೇಟೆ(ವಿಜಯನಗರ)-ಹರ್ ಘರ್ ತಿರಂಗಾ ಅಭಿಯಾನವನ್ನು ಇಡೀ ಜಿಲ್ಲೆಯಾದ್ಯಂತ ವೈವಿಧ್ಯಮಯ/ವರ್ಣರಂಜಿತವಾಗಿ ಹಾಗೂ ಹಬ್ಬದ ರೀತಿಯಲ್ಲಿ ಆಚರಿಸಲು ವಿಜಯನಗರ ಜಿಲ್ಲಾಡಳಿತ ನಿರ್ಧರಿಸಿದೆ.
ಹಿನ್ನೆಲೆಯಲ್ಲಿ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರೀಯ ಧ್ವಜ ಅಭಿಯಾನವನ್ನು ಇದೇ ಆ.13ರಿಂದ ಆ.15ರವರೆಗೆ ಆಚರಿಸಲಾಗುತ್ತಿದ್ದು,ಸಾರ್ವಜನಿಕರು ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ,ದೇಶಾಭಿಮಾನವನ್ನು ಬಿಂಬಿಸುವ ಮೂಲಕ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕು ಎಂದು ತಿಳಿಸಿದ್ದಾರೆ.
——
ಹರ್ ಘರ್ ಜಲೋತ್ಸವ ಆಚರಣೆ ಅನುಷ್ಠಾನ:ಜಿಪಂ ಸಿಇಒ ಜಿ.ಲಿಂಗಮೂರ್ತಿ


BP News  ಬಳ್ಳಾರಿ,ಆ.10-ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಮೂಲಕ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಪಂನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಲಿಂಗಮೂರ್ತಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜಲ ಜೀವನ್ ಮಿಷನ್ ಯೋಜನೆಯಡಿ “ಆಟೋ ಪ್ರಚಾರ” ವಾಹನಕ್ಕೆ ಜಿಪಂ ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದರು.
——
ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗೆ ಸಹಕಾರಿ:ಡಿಎಚ್‍ಒ ಡಾ.ಜನಾರ್ಧನ್


BP News  ಬಳ್ಳಾರಿ,ಆ.10-ಇದೇ ಆ.17ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಶಾ ಕಾರ್ಯಕರ್ತೆಯರು ಜಿಲ್ಲೆಯಲ್ಲಿ ಮನೆ ಮನೆಗೆ ಭೇಟಿ ನೀಡುವ ಮೂಲಕ 6,31,565 ಮಕ್ಕಳಿಗೆ ಜಂತುಹುಳು ನಿವಾರಕ ಆಲ್ಬಂಡೋಜೋಲ್ ಮಾತ್ರೆಗಳನ್ನು ವಿತರಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್ ಜನಾರ್ಧನ್ ಹೇಳಿದರು.
ನಗರದ ಸೆಂಟ್ ಫೀಲೋಮಿನಾ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
——
ಮನಃಪರಿವರ್ತನೆ, ವಿಚಾರ ಸಂಕೀರ್ಣ ಮತ್ತು ಚಿಂತನ ಮಂಥನ ಕಾರ್ಯಕ್ರಮ


BP News  ಹೊಸಪೇಟೆ(ವಿಜಯನಗರ),ಆ.10-ಅಖಿಲ ಕರ್ನಾಟಕ ಸಾಂಸ್ಕ್ರತಿಕ ಕಲಾ ಕೇಂದ್ರ ಹಾಗೂ ಹೊಸಪೇಟೆ ತಾಲೂಕು ಉಪಕಾರಾಗೃಹ ಇವರ ಸಂಯುಕ್ತಾಶ್ರಯದಲ್ಲಿ ಕಾರಾಗೃಹದ ಬಂದಿಗಳಿಗೆ ಮನಃಪರಿವರ್ತನೆ, ವಿಚಾರ ಸಂಕೀರ್ಣ ಮತ್ತು ಚಿಂತನ ಮಂಥನ ಕಾರ್ಯಕ್ರಮವನ್ನು ತಾಲೂಕು ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಿವೃತ್ತ ಉಪನ್ಯಾಸಕ ಡಾ.ಹೆಚ್.ಎಂ.ಚಂದ್ರಶೇಖರ್ ಶಾಸ್ತ್ರಿ, ಹೊಸಪೇಟೆ ಕನ್ನಡ ಜಾನಪದ ಪರಿಷತ್‍ನ ಅಧ್ಯಕ್ಷೆ ಅಂಜಲಿ ಬೆಳಗಲ್, ಸೇರಿದಂತೆ ಕಾರಾಗೃಹದ ಎಲ್ಲಾ ಸಿಬ್ಬಂದಿಗಳು ಇದ್ದರು.
——
ಜಂತುಹುಳು ಬಾಧೆ ಸುಲಭವಾಗಿ ನಿಯಂತ್ರಿಸಿ:ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್


BP News  ಹೊಸಪೇಟೆ(ವಿಜಯನಗರ),ಆ.10-ಜಂತುಹುಳು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು; ಜಂತುಹುಳು ಬಾಧೆಯನ್ನು ಸುಲಭವಾಗಿ ನಿಯಂತ್ರಿಸಲು ಆಲ್ಬಂಡೋಜೋಲ್ ಮಾತ್ರೆಯನ್ನು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಹೇಳಿದರು.
ಹೊಸಪೇಟೆಯ ಪಾಂಡುರಂಗ ಕಾಲೋನಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
——-
ಯುವಕರಲ್ಲಿ ಸಂಚಾರಿ ಅರಿವು ಮೂಡಿಸಲು ಕರ್ನಾಟಕ ಪತ್ರಕರ್ತರ ಸಂಘ ಆಗ್ರಹ


BP News ಬಳ್ಳಾರಿ,ಆ.10-ಪಡ್ಡೆ ಹುಡುಗರು, ಯುವಕರು ತ್ರಿಬ್ಬಲ್ ರೈಡಿಂಗ್‍ನಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನಗಳನ್ನು ಓಡಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಎಲ್ಲಾ ಶಾಲೆಗಳಲ್ಲಿ ಸಂಚಾರಿ ನಿಯಮ ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕರ್ನಾಟಕ ಪತ್ರಕರ್ತರ ಸಂಘವು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಚಾರಿ ಪೊಲೀಸ್ ಇಲಾಖೆಗೆ ಆಗ್ರಹಿಸಿದೆ.
ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಭೂಪಾಲ್ ಇವರ ನೇತೃತ್ವದ ನಿಯೋಗವು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮತ್ತು ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.
—-

LEAVE A REPLY

Please enter your comment!
Please enter your name here