ವಿಜಯನಗರ ಜಿಲ್ಲೆಯಲ್ಲಿ 76ನೇ ಸ್ವಾತಂತ್ರೋತ್ಸವ ದಿನಾಚರಣೆ

0
239

BP NEWS: ಹೊಸಪೇಟೆ(ವಿಜಯನಗರ): ಆಗಸ್ಟ್.14: ವಿಜಯನಗರ ಜಿಲ್ಲಾಡಳಿತ ವತಿಯಿಂದ 76ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆ.15ರಂದು ಬೆಳಗ್ಗೆ 09ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಧ್ವಜಾರೋಹಣಾ ನೆರವೇರಿಸಿ ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ.
ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.


ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಪಿ.ಟಿ.ಪರಮೇಶ್ವರನಾಯ್ಕ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ ಎಲ್.ಬಿ.ಪಿ, ಜಿ.ಕರುಣಾಕರ ರೆಡ್ಡಿ, ಎಸ್.ವಿ ರಾಮಚಂದ್ರ, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ನಗರಸಭೆಯ ಅಧ್ಯಕ್ಷರಾದ ಸುಂಕಮ್ಮ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್‍ರಾವ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಅವರು ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ದೇಶದ ಅತಿ ಎತ್ತರದ ಧ್ವಜಸ್ತಂಭದ ಲೋಕಾರ್ಪಣೆ ಹಾಗೂ ಧ್ವಜಾರೋಹಣವನ್ನು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ನೆರವೇರಿಸಲಿದ್ದಾರೆ.

LEAVE A REPLY

Please enter your comment!
Please enter your name here