ಬಳ್ಳಾರಿಯಲ್ಲಿ ಸಂಭ್ರಮದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ

0
140

BP NEWS: ಬಳ್ಳಾರಿ: ಸೆಪ್ಟೆಂಬರ್.10: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಈಡಿಗರ ಹಾಸ್ಟೆಲ್ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವದ ಮೆರವಣಿಗೆಗೆ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಚಾಲನೆ ನೀಡಿದರು.


ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸುವುದರ ಮೂಲಕ ಜಯಂತ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಜೆ.ಎನ್.ಗಣೇಶ್, ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಈಡಿಗ ಸಮಾಜದ ಮುಖಂಡರು ಇದ್ದರು.
ನಂತರದ ವೇದಿಕೆ ಕಾರ್ಯಕ್ರಮವನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಅವರು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಾಚೀನ ಭಾರತದಲ್ಲಿ ಸಾಮಾಜಿಕ ಸುಧಾರಣೆಯಲ್ಲಿ ಹೆಚ್ಚು ಒತ್ತು ನೀಡಿದವರು ಬ್ರಹ್ಮಶ್ರೀ ನಾರಾಯಣಗುರುಗಳು ಮತ್ತು ಈಡಿಗ ಸಮುದಾಯಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.
ಈಡಿಗ ಸಮಾಜದ ಬಾಂಧವರಿಗೆ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ಈಡಿಗ ಸಮುದಾಯದ ಏಳಿಗೆಗೆ ಹಾಗೂ ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲಿದ್ದೇವೆ ಎಂದು ಹೇಳಿದರು.


ಕಂಪ್ಲಿ ಕ್ಷೇತ್ರದ ಶಾಸಕರಾದ ಜೆ.ಎನ್.ಗಣೇಶ್ ಅವರು ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ನಿಷ್ಠಿರುದ್ರಪ್ಪ ಅವರು ಜಯಂತ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವದ ಮೆರವಣಿಗೆಯು ಈಡಿಗರ ಹಾಸ್ಟೆಲ್ ಆವರಣದಿಂದ ಪ್ರಾರಂಭವಾಗಿ ಗಡಿಗಿ ಚೈನ್ನಪ್ಪ ವೃತ್ತ ಮೂಲಕ ಮೀನಾಕ್ಷಿ ವೃತ್ತ ಮಾರ್ಗವಾಗಿ ರಾಘವೇಂದ್ರ ಚಿತ್ರಮಂದಿರ ರಸ್ತೆ ಹಾಗೂ ಇಂದಿರಾ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು.
ಜಯಂತ್ಯೋತ್ಸವದ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕøತಿಕ ಕಲಾತಂಡಗಳು ಗಮನಸೆಳೆದವು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಈಡಿಗ ಸಮಾಜದ ಕಾರ್ಯದರ್ಶಿ ಸತೀಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ ಕೆ.ರಂಗಣ್ಣವರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಈಡಿಗ ಸಮುದಾಯದ ಭಾಂದವರು ಮತ್ತು ಇನ್ನೀತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here