ಮಗಳು ಜಾನಕಿ ಧಾರಾವಾಹಿಯ ಖ್ಯಾತ ನಟ ಮಂಡ್ಯ ರವಿ ವಿಧಿವಶ.

0
163

BP NEWS: ಬೆಂಗಳೂರು: ಸಪ್ಟೆಂಬರ್ 15: ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ಮಂಡ್ಯ ರವಿ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ರವಿ ಅವರು ಟಿ.ಎನ್ ಸೀತಾರಾಮ್ ಅವರ ಹಲವು ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ರವಿ ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.
ಮಗಳು ಜಾನಕಿ ಧಾರಾವಾಹಿ ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು. ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here