BP NEWS: ಬಳ್ಳಾರಿ: ಸೆಪ್ಟೆಂಬರ್.17: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ವಿಶ್ವಕರ್ಮ ಜಯಂತ್ಯೋತ್ಸವದ ಮೆರವಣಿಗೆಗೆ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಚಾಲನೆ ನೀಡಿದರು.
ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸುವುದರ ಮೂಲಕ ಜಯಂತ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.
ನಂತರದ ವೇದಿಕೆ ಕಾರ್ಯಕ್ರಮವನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದ ಬಾಂಧವರಿಗೆ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ವಿಶ್ವಕರ್ಮ ಸಮುದಾಯದ ಏಳಿಗೆಗೆ ಹಾಗೂ ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲಿದ್ದೇವೆ ಎಂದು ಹೇಳಿದರು.
ಮೆರವಣಿಗೆಯು ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಬೆಂಗಳೂರು ರಸ್ತೆ ಮಾರ್ಗವಾಗಿ ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ರಸ್ತೆ ಹಾಗೂ ಹೆಚ್. ಆರ್ ಗವಿಯಪ್ಪ ವೃತ್ತ ಮಾರ್ಗವಾಗಿ ಗಡಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡುಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ.ಗಂಗಾಧರ ದೈವಜ್ಞ ಅವರು ವಿಶ್ವಕರ್ಮ ಜಯಂತಿಯ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಜಯಂತ್ಯೋತ್ಸವದ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕøತಿಕ ಕಲಾತಂಡಗಳು ಗಮನಸೆಳೆದವು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ, ಮಹಾನಗರ ಪಾಲಿಕೆಯ ಮೇಯರ್ ಎಂ.ರಾಜೇಶ್ವರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ ಕೆ.ರಂಗಣ್ಣವರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಮತ್ತು ಇನ್ನೀತರು ಉಪಸ್ಥಿತರಿದ್ದರು.