BP NEWS: ಬಳ್ಳಾರಿ: ಸೆಪ್ಟೆಂಬರ್.20: ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು ಸಂಸ್ಥಾಪಕರ ಸಂಸ್ಮರಣಾ ದಿನಾಚರಣೆ ಸೆ.22 ರಂದು ಗುರುವಾರ ನಗರದ ಶ್ರೀ ಸತ್ಯಂ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆ.10-30 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹೆಸರಾಂತ ಅಂತರಾಷ್ಟ್ರೀಯ ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರು ವಹಿಸುವರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಯಲಾಟ ಕಲಾವಿದೆ ಬಿ. ಸುಜಾತಮ್ಮ, ಚಿಗುರು ಕಲಾ ತಂಡದ ಅಧ್ಯಕ್ಷ, ಜಾನಪದ ಯುವ ಗಾಯಕ ಎಸ್ ಎಂ ಹುಲುಗಪ್ಪ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆಲಂ ಭಾಷ ಅವರು ಕರ್ನಾಟಕ ಜಾನಪದ ಪರಿಷತ್ ಸಂಸ್ಥಾಪಕ ನಾಡೋಜ ಹೆಚ್ ಎಲ್ ನಾಗೇಗೌಡ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾಲೇಜ್ ಪ್ರಾಂಶುಪಾಲರೂ ಆಗಿರುವ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ. ಅಶ್ವ ರಾಮಾಂಜಿನೇಯ (ಅಶ್ವರಾಮು) ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪರಿಷತ್ತು ಪ್ರಕಟಣೆ ತಿಳಿಸಿದೆ.