BP NEWS: ಬಳ್ಳಾರಿ: ಸೆಪ್ಟೆಂಬರ್.28: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ-2022 ಆರೋಗ್ಯ ಕರ್ನಾಟಕ ಅಭಿಯಾನದಡಿಯಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಜಾಗೃತಿ ಜಾಥಾಗೆ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಡಿಸಿ ಪಿ.ಎಸ್.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್.ಜನಾರ್ಧನ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಅಂದಾನಪ್ಪ ವಡಗೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ ಚವ್ಹಾಣ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್.ಆರ್, ಕ್ಷಯಾರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ,
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿಗಳಾದ ಡಾ.ವಿರೇಂದ್ರ ಕುಮಾರ್, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಹನುಮಂತಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಶಂಭುಲಿಂಗ ಕುಮಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಈಶ್ವರ್ ಹೆಚ್. ದಾಸಪ್ಪನವರ, ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂಧಿಗಳು ಹಾಗೂ ನಗರದ ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಇದ್ದರು.