ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅರ್ಥಪೂರ್ಣ ಆಚರಣೆಗೆ ಕ್ರಮ: ಡಿಸಿ ಪವನ್‍ಕುಮಾರ್ ಮಾಲಪಾಟಿ

0
106

BP NEWS: ಬಳ್ಳಾರಿ: ಸೆಪ್ಟೆಂಬರ್.28: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 9 ರಂದು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸಭೆಯಲ್ಲಿ ಸಮಾಜದ ಮುಖಂಡರುಗಳು ತಮ್ಮ ಬೇಡಿಕೆಗಳನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು, ಸಾರ್ವಜನಿಕರು ಸರ್ಕಾರಿ ಹಬ್ಬಗಳಲ್ಲಿ ಸ್ವ-ಇಚ್ಛೆಯಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದ ಅವರು, ಸಭೆಯಲ್ಲಿ ಸಮಾಜ ಮುಖಂಡರು ಪ್ರಸ್ತಾಪಿಸಿದ ಮೀಸಲಾತಿ ಬೇಡಿಕೆಯ ಮನವಿಯನ್ನು ಸರ್ಕಾರಕ್ಕೆ ತಲುಪಿಸಲಿದ್ದೇವೆ ಎಂದು ಹೇಳಿದರು.
ಜಯಂತಿಯ ವೇದಿಕೆ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತವು ಮಾಡಿಕೊಂಡಿದೆ ಎಂದು ತಿಳಿಸಿ ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.


ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಡಾ.ಆಕಾಶ್ ಶಂಕರ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here