BP NEWS: ಬಳ್ಳಾರಿ: ಸೆಪ್ಟೆಂಬರ್.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ-ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 01ರಂದು ಬೆಳಗ್ಗೆ 10.30ಕ್ಕೆ ಮೋತಿ ವೃತ್ತದ ಬುಡಾ ಕಚೇರಿಯ ಹತ್ತಿರದ ಕೆ.ಇ.ಬಿ ಫಂಕ್ಷನ್ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಉದ್ಘಾಟನೆ ಮಾಡಲಿದ್ದಾರೆ.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ ತುಕಾರಾಂ, ಬಿ.ನಾಗೇಂದ್ರ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್ ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಮಹಾನಗರ ಪಾಲಿಕೆ ಮಹಾಪೌರರಾದ ಎಂ.ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಪ್ರಸಾದ್ ಸೇರಿದಂತೆ ಇನ್ನೀತರು ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್ ಜೆ.ಬಾಳೆ, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ಲಿಂಗಮೂರ್ತಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸೈದುಲು ಅಡಾವತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಕೆ.ಹೆಚ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳಾದ ಗೋವಿಂದಪ್ಪ ಹೆಚ್.ಎಂ ಸೇರಿದಂತೆ ಇನ್ನೀತರರು ಉಪಸ್ಥಿತರಿರಲಿದ್ದಾರೆ.