ವಿಜಯನಗರ ಜಿಲ್ಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಆಚರಣೆ

0
113

BP NEWS: ಹೊಸಪೇಟೆ(ವಿಜಯನಗರ): ಅಕ್ಟೋಬರ್.9: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಆಚರಿಸಲಾಯಿತು.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ಎಲ್ಲರಿಗೂ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ನಂತರ ಅವರು ಮಾತನಾಡಿ, ವಿಜಯನಗರ ಜಿಲ್ಲೆಯಾದ ನಂತರ ಜಿಲ್ಲಾಡಳಿತ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಎರಡನೇ ಬಾರಿಗೆ ಆಚರಿಸಲಾಗುತ್ತಿದೆ ಎಂದರು.


ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ, ಏಕಲವ್ಯ, ಶಬರಿ ಹಾಗೂ ಬೇಡರ ಕಣ್ಣಪ್ಪ ಅವರನ್ನು ಸ್ಮರಿಸಿದರು ಮತ್ತು ರಾಮಾಯಣವನ್ನು ಓದಿ ನಮ್ಮ ಜೀವನದಲ್ಲಿ ಅನೇಕ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕಾಗಿ ದಶಕಗಳಿಂದ ಹೋರಾಟಗಳು ನಡೆದಿವೆ ಅದರ ಪ್ರತಿಫಲ ಇಂದು ದೊರೆತಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಅವರು ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದಂತಹ ರಾಮಾಯಣ ಕೇವಲ ಭಾರತ ದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಥೈಲಾಂಡ್, ಇಂಡೋನೇಷಿಯಾ ಹಾಗೂ ಕಾಂಬೋಡಿಯಾ ಸೇರಿದಂತೆ ಹಲವಾರು ಕಡೆ ರಾಮಾಯಣದ ಬಗ್ಗೆ ವಿಶೇಷ ಗೌರವವಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು, ಶ್ರೀ ಮಹರ್ಷಿ ವಾಲ್ಮೀಕಿ ಅವರ ಸಂದೇಶ ನಮ್ಮ ದೇಶಕ್ಕೆ ಮತ್ತು ನಮ್ಮ ದೇಶದ ಜನರಿಗೆ ಹಾಗೂ ಇಡೀ ವಿಶ್ವಕ್ಕೆ ಸೇರಬೇಕು ಎಂದು ಅವರು ಹೇಳಿದರು.


ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಡಾ.ವಿರೂಪಾಕ್ಷಿ ಪೂಜಾರಹಳ್ಳಿ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಹಾಗೂ ರಾಮಾಯಣದ ಮೌಲ್ಯಗಳ ಮತ್ತು ಅಂಶಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ಮತ್ತು ಸಮಾಜದ ಮುಖಂಡರುಗಳು ಹಾಗೂ ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here