BP NEWS: ಹೊಸಪೇಟೆ(ವಿಜಯನಗರ):ಅಕ್ಟೋಬರ್.14: ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆಸಲ್ಲಿಸಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಸಚಿವರಾಗಿ ವರ್ಗಾವಣೆಗೊಂಡಿರುವ ಎನ್.ಮಹೇಶ್ಬಾಬು ಅವರಿಗೆ ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಸಂಜೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ವಿಜಯನಗರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕಚೇರಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಅನೇಕರು ಎನ್.ಮಹೇಶ್ಬಾಬು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು ಮತ್ತು ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಆಶಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ಬಾಬು ಅವರು ನೂತನ ವಿಜಯನಗರ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ದೊರೆತಿರುವುದು ನನ್ನ ಪುಣ್ಯವಾಗಿದ್ದು, ಸಾರ್ವಜನಿಕರ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸೇವೆಯನ್ನು ಆತ್ಮಸಾಕ್ಷಿಯಿಂದ ಮಾಡಿದ ತೃಪ್ತಿ ಇದೆೆ ಎಂದರು.
ನAತರ ತಮಗೆ ಸಹಕಾರ ನೀಡಿದ ಜಿಲ್ಲಾಧಿಕಾರಿ ಕಚೇರಿಯ ಪ್ರತಿಯೊಬ್ಬ ಸಿಬ್ಬಂದಿಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅಪರ ಜಿಲ್ಲಾಧಿಕಾರಿಗಳು ಎಲ್ಲಾರಿಗೂ ಕೃತಜ್ಞತೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯನಗರ ಪ್ರಬಾರಿ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್, ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎನ್.ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೀರೇಶ್, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ಗಳಾದ ಮೇಘ, ಪ್ರತಿಭಾ, ಗುರುಬಸವರಾಜ, ಕಾರ್ತಿಕ್, ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.