ಬಳ್ಳಾರಿ: ಪೌಷ್ಟಿಕ ಆಹಾರ ಕಿಟ್ ವಿತರಣೆ.

0
87

BP NEWS: ಬಳ್ಳಾರಿ: ಅಕ್ಟೋಬರ್.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಸಂಯುಕ್ತಾಶ್ರಯದಲ್ಲಿ ಬಂಡಿಹಟ್ಟಿ ನಗರ ಆರೋಗ್ಯ ಕೇಂದ್ರದಲ್ಲಿ ದಾನಿ ಅಲಿಮುದ್ದಿನ ಹೊತುರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ವಯಂಪ್ರೇರಣೆಯಿಂದ ಕ್ಷಯರೋಗ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮುಂದಿನ 06 ತಿಂಗಳವರೆಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ಮಾತನಾಡಿ, ಸಾಮಾನ್ಯವಾಗಿ ಕ್ಷಯರೋಗದಿಂದ ಬಳಲುವ ರೋಗಿಗಳಿಗೆ ರೋಗದ ತೀವ್ರತೆಯು ಕೆಲವೊಮ್ಮೆ ಅರ್ಥಿಕ ದುಸ್ಥಿತಿಗೆ ತಳ್ಳುತ್ತದೆ. ಇಂತವರಿಗೆ ಸಹಾಯ ಮಾಡಲು ದಾನಿಗಳು ಮುಂದೆ ಬಂದಲ್ಲಿ ಪೋಷಣೆ ಮತ್ತು ಕಾಳಜಿಯ ಬೆಂಬಲ ಅವರನ್ನು ಗುಣಮುಖರಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಚಿಕಿತ್ಸೆ ಪಡೆಯುತ್ತಿರುವ ರೋಗಿಗೆ 06 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ದಿನಗಳ ಬೆಂಬಲದ ಅವಶ್ಯಕತೆ ಇದೆ. ಈಗಾಗಲೇ ಜಿಲ್ಲೆಯಾದ್ಯಾಂತ 152 ಕ್ಷಯರೋಗಿಗಳಿಗೆ ದಾನಿಗಳಿಂದ ಪೌಷ್ಟಿಕ ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು ಕ್ಷಯರೋಗವಾಗಿರಬಹುದು ಈ ಹಿನ್ನಲೆಯಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಕಫ ಪರೀಕ್ಷೆಯನ್ನು ಕೈಗೊಂಡು ಕ್ಷಯಮುಕ್ತರಾಗಿ ಎಂದು ತಿಳಿಸಿದರು.
ಆಸಕ್ತ ದಾನಿಗಳು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿಕೊಡಿ ಅಥವಾ ಮೊ.9164447599 ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಎಂದರು.


ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ ಅವರು ಮಾತನಾಡಿ, ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ನೀ-ಕ್ಷಯಮಿತ್ರ ಎಂಬ ವಿಶೇಷ ಆಂದೋಲನವನ್ನು ದಾನಿಗಳ ಮೂಲಕ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯವರ ಮೂಲಕ ದಾನ ಮಾಡುವ ಮನಸ್ಸುಳ್ಳವರಿಗೆ ಮಾಹಿತಿ ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾನಿಗಳಾದ ಡಾ.ಹೆಚ್ ನಿಜಾಮುದ್ದಿನ್ ಹಾಗೂ ವೈದ್ಯಾಧಿಕಾರಿಗಳಾದ ಡಾ.ಕಾಶಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷಯರೋಗ ಕಾರ್ಯಕ್ರಮ ಸಿಬ್ಬಂದಿವರಾದ ಓಬಳರೆಡ್ಡಿ, ಬಸವರಾಜ ರಾಜಗುರು, ವೀರೇಶ, ಚಂದ್ರಶೇಖರ, ಪುಷ್ಪಾ, ಪಾರ್ವತಿ, ಖರ್ಮುನ್ನಿಸಾ ಬೇಗಂ, ಮುಮ್ತಾಜ್, ಶೋಭಾ, ಶಾರದಾ, ದಾನಕುಮಾರಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here