ನನ್ನ ನಾಡು, ನನ್ನ ಹಾಡು ಅಭಿಯಾನ ಬಳ್ಳಾರಿ ಜಿಲ್ಲೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

0
97

BP NEWS: ಬಳ್ಳಾರಿ: ಅಕ್ಟೋಬರ್.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ನನ್ನ ನಾಡು, ನನ್ನ ಹಾಡು ಎಂಬ ಅಭಿಯಾನದ ಅಂಗವಾಗಿ ಶುಕ್ರವಾರ ಇಡೀ ಜಿಲ್ಲೆಯಾದ್ಯಂತ ಏಕಕಾಲದಲ್ಲಿಯೇ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.


67ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತಗಾಯನ ಕೋಠಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ವಿಮ್ಸ್ ಮೈದಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾವಿದರಿಂದ ಮತ್ತು ಶಾಲಾ ಮಕ್ಕಳಿಂದ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ “ಜಯಭಾರತ ಜನನಿಯ ತನುಜಾತೆ”, ಹುಯಿಲಗೋಳ ನಾರಾಯಣ್‍ರಾವ್ ಅವರ “ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು”, ಚೆನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ”, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಡಿಎಸ್ ಕರ್ಕಿ ಅವರ “ಹಚ್ಚೇವು ಕನ್ನಡ ದೀಪ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಆರು ಗೀತೆಗಳನ್ನು ಹಾಡಲಾಯಿತು.


ಕನ್ನಡ ನಾಡಿನ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣತೋಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂಬ ಪ್ರತಿಜ್ಞಾವಿಧಿಯನ್ನು ನೆರೆದವರು ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಲಿಂಗಮೂರ್ತಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಶಾಲಾ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here