ಬಳ್ಳಾರಿ: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಶೇ.50% ರಿಯಾಯಿತಿ ಪುಸ್ತಕ

0
97

BP NEWS: ಬಳ್ಳಾರಿ: ಅಕ್ಟೋಬರ್.31: ಕನ್ನಡ ರಾಜ್ಯೋತ್ಸವದ ಅಂಗವಾಗಿ 2022 ಸಾಲಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕರಿಯಪ್ಪ ಎನ್ ತಿಳಿಸಿದ್ದಾರೆ.
ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯವಿದ್ದು, ಪ್ರಾಧಿಕಾರದ ವೆಬ್‍ಸೈಟ್ www Kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಅನ್‍ಲೈನ್ ಮೂಲಕ ಹಣ ಪಾವತಿಸಿ, ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 458 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here