BP NEWS: ಬೆಂಗಳೂರು: ನವೆಂಬರ್.08: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.
80 ವರ್ಷದ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಜೀವರಕ್ಷಕ ಸಾದನ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.