ಅರ್ಜಿ ಅವಧಿ ವಿಸ್ತರಣೆ

0
116

BP NEWS: ಬಳ್ಳಾರಿ: ನವೆಂಬರ್.10: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ತಿಳಿಸಿದ್ದಾರೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನವೆಂಬರ್ 22, ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಇತರೆ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಮೊ.8050370006 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here