ಕೆಎಂಇಆರ್‍ಸಿ ಯೋಜನೆಯಡಿ ಕೌಶಲ್ಯ ತರಬೇತಿ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

0
128

BP NEWS: ಬಳ್ಳಾರಿ: ನವೆಂಬರ್.23: ವಿವಿಧ ಶಿಕ್ಷಣ ಹಿನ್ನೆಲೆಯಿಂದ ಬರುವಂತಹ ಸ್ಥಳೀಯ ಯುವಕ ಮತ್ತು ಯುವತಿಯರಿಗೆ ಕೌಶಲ್ಯಭಿವೃದ್ಧಿ ತರಬೇತಿ ನೀಡಬೇಕು ಎಂದು ಕೆಎಂಇಆರ್‍ಸಿಯ ವ್ಯವಸ್ಥಾಪಕ ನಿರ್ದೇಶಕರಾದ ಪಿಸಿ ರಾಯ್ ಅವರು ಹೇಳಿದರು.
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಎಂಆರ್‍ಸಿ ಯೋಜನೆಯಡಿ ಕೌಶಲ್ಯ ತರಬೇತಿ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ವಿವಿಧ ಶಿಕ್ಷಣ ಹಿನ್ನೆಲೆಯಿಂದ ಬರುವ ಸ್ಥಳೀಯ ಆಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಬೇಕು. ಅಭ್ಯರ್ಥಿಗಳ ತರಬೇತಿ ಮತ್ತು ಪ್ರಮಾಣೀಕರಣದ ನಂತರ, ಹತ್ತಿರದ ಕೈಗಾರಿಕೆಗಳು ಮತ್ತು ಗಾರ್ಮೆಂಟ್‍ಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಡಬೇಕು ಎಂದು ತಿಳಿಸಿದರು.
ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅಭ್ಯಸಿಸುವ ತರಬೇತುದಾರರಿಗೆ ತರಬೇತಿ ಅವಧಿಯೊಳಗೆ ಕೈಗಾರಿಕೆಗಳಲ್ಲಿ ಮೂರು ತಿಂಗಳು ಕೌಶಲ್ಯಭಿವೃದ್ಧಿ ತರಬೇತಿಯನ್ನು ಪಡೆಯಲು ಸೂಚಿಸಬೇಕು ಎಂದು ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಿದರು.


ಚೇಂಬರ್ಸ್ ಆಫ್ ಕಾಮರ್ಸ್ ಹಾಗೂ ಉದ್ಯಮಿದಾರರು, ಕೈಗಾರಿಕೆ ಸ್ಥಾಪಿಸಲು ಸೂಕ್ತವಾದ ಸ್ಥಳವನ್ನು ಒದಗಿಸಿಕೊಟ್ಟಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ಸೃಷ್ಠಿಗೊಳ್ಳುತ್ತವೆ ಎಂದು ಸಭೆಯಲ್ಲಿ ಮನವಿ ಮಾಡಿದರು.
ಕೌಶಲ್ಯ ತರಬೇತಿ ಕಾರ್ಯಕ್ರಮದ ಯೋಜನೆಯಲ್ಲಿ ವಿವಿಧ ವಲಯಗಳ ಕೈಗಾರಿಕಾ ಸಂಘಗಳಿಗೆ ಬೇಡಿಕೆಯ ಸಮೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿಯ ಕುರಿತು ಪ್ರಸ್ತಾವನೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ನೀಡಿ, ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಪಂ ಸಿಇಒ ಲಿಂಗಮೂರ್ತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಬಗಾದಿ ಗೌತಮ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಕೈಗಾರಿಕಾ ವಲಯ ಉದ್ಯಮಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here