BP NEWS: ಹೊಸಪೇಟೆ(ವಿಜಯನಗರ): ನವೆಂಬರ್.28: ವಿಜಯನಗರ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ನ.29ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ನಗರದ ಚಿತ್ತವಾಡ್ಗಿಯ ಆಕಾಶ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಆಯೋಜಿಸಲಾಗಿದೆ.
ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೆಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ ಗೋಪಾಲಕೃಷ್ಣ, ಭೀಮನಾಯ್ಕ ಎಲ್.ಬಿ.ಪಿ, ಜಿ.ಕರುಣಾಕರರೆಡ್ಡಿ, ಎಸ್.ವಿ.ರಾಮಚಂದ್ರ, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್‍ರಾವ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಉಪನಿರ್ದೇಶಕಿ (ಅಭಿವೃದ್ಧಿ) ಎ.ಹನುಮಕ್ಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಜಿ.ಕೊಟ್ರೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.