ರಸ್ತೆ ಸುರಕ್ಷತಾ ಜಾಗೃತಿ ವಾಹನಕ್ಕೆ ಸಚಿವ ಬಿ.ಶ್ರೀರಾಮುಲು ಅವರಿಂದ ಚಾಲನೆ

0
78

BP NEWS: ಬಳ್ಳಾರಿ: ನವೆಂಬರ್.28: ಕರ್ನಾಟಕ ರಾಜ್ಯ ರಸ್ತೆ ಪ್ರಾಧಿಕಾರದ ವತಿಯಿಂದ ವಾಹನಗಳನ್ನು ಚಾಲನೆ ಮಾಡುವ ವೇಳೆ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸಲು ರಸ್ತೆ ಬಳಕೆದಾರರಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ತಮ್ಮ ನಿವಾಸದ ಗೃಹ ಕಚೇರಿಯಿಂದ ಚಾಲನೆ ನೀಡಿದರು.
ಜಿಲ್ಲೆಯಾದ್ಯಂತ 15 ದಿನಗಳ ಕಾಲ ಎಲ್ಲಾ ತಾಲೂಕಿನ ಹೋಬಳಿ ಮಟ್ಟದಲ್ಲಿ ಸಂಚರಿಸಲಿದ್ದು, ವಾಹನ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್‍ಗಳನ್ನು ಧರಿಸುವುದು ಸೇರಿದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಅಭಿಯಾನ ನಡೆಸಲಿದೆ.
ಈ ಸಂದರ್ಭದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಿರೀಶ್ ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here