ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023

0
81

BP NEWS: ಬಳ್ಳಾರಿ: ಡಿಸೆಂಬರ್.03: 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.
ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ನಡೆಯುತ್ತಿದ್ದು, 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ಹೆಸರನ್ನು ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಯುವ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ತಮ್ಮ ಮತವನ್ನು ಮಾರಿಕೊಳ್ಳಬಾರದು. ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಗೊಳ್ಳಲು ಸ್ವಯಂ ಪ್ರೇರಿತವಾಗಿ ಅರ್ಹ ಮತ್ತು ಉತ್ತಮ ನಾಯಕರನ್ನು ಆರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವಿಕೆ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳು ನಿಮ್ಮವರಿಗೂ ತಿಳಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, ಪ್ರಜಾಸ್ವಾಮ್ಯ ವ್ಯವಸ್ಥೆ ಎಂದರೆ ಅದು ಜನರ ಅಧಿಕಾರ, ಆ ಅಧಿಕಾರವು ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಸಿಗುತ್ತದೆ ಎಂದು ತಿಳಿಸಿದರು.
ನಂತರದಲ್ಲಿ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ಮತದಾರರ ಪಟ್ಟಿಗೆ ಸೇರ್ಪಡೆಗೆ ಸಂಬಂಧಿಸಿದಂತೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತರಾದ ಹೇಮಂತ್.ಎನ್, ಪೆÇ್ರಬೆಷನರಿ ಅಧಿಕಾರಿ ರೂಪಿಂದರ್ ಕೌರ್, ತಹಶೀಲ್ದಾರ ವಿಶ್ವನಾಥ, ಪ್ರಾಂಶುಪಾಲರಾದ ಮಂಜುನಾಥ ರೆಡ್ಡಿ, ಲೀಡ್ ಕಾಲೇಜ್ ಮತದಾರರ ಕ್ಲಬ್ ನ ಸಂಯೋಜಕರಾದ ಜನಾರ್ಧನ ರೆಡ್ಡಿ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here