BP NEWS: ಬಳ್ಳಾರಿ: ಡಿಸೆಂಬರ್.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ಮತ್ತು ವಲ್ರ್ಡ್ ವಿಷನ್ ಇಂಡಿಯಾ ಇವರ ಸಂಯುಕ್ತಾಶ್ರಯದಲ್ಲಿ ಶುದ್ಧ ಕುಡಿಯುವ ನೀರು, ನೈರ್ಮಲ್ಯ ಶುಚಿತ್ವ ಕುರಿತು ಜನಜಾಗೃತಿ ಮೂಡಿಸುವ ವಾಹನಕ್ಕೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.
ಈ ವಾಹನವು ಜಿಲ್ಲೆಯಾದ್ಯಂತ 5 ದಿನಗಳ ಕಾಲ ಸುಮಾರು 40 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ.
ಈ ಸಂದರ್ಭದಲ್ಲಿ ಜಿಪಂನ ಯೋಜನಾ ನಿರ್ದೇಶಕರಾದ ಲಕ್ಷ್ಮಣ ಶೃಂಗೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ವಲ್ರ್ಡ್ ವಿಷನ್ ಇಂಡಿಯಾ ಜಿಲ್ಲಾ ವ್ಯವಸ್ಥಾಪಕರಾದ ಪ್ರೇಮಲತಾ ಸೇರಿದಂತೆ ಸಿಬ್ಬಂದಿಗಳು ಇದ್ದರು.