BP NEWS: ಬಳ್ಳಾರಿ: ಡಿಸೆಂಬರ್.14: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನ ನಿಮಿತ್ತ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿಯವರು ಪ್ರತಿ ತಿಂಗಳು 3ನೇ ಶನಿವಾರದಂದು ಒಂದು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮದ ಸಮಸ್ಯೆ, ಮನವಿಗಳ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಡಿಸೆಂಬರ್ 17 ರಂದು ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯ ಕರ್ಚೇಡು ಗ್ರಾಮದಲ್ಲಿ ವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ.
ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ: ಡಿ.17ರಂದು ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯ ಕರ್ಚೇಡು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಬಳ್ಳಾರಿ ತಾಲೂಕಿನ ತಹಶೀಲ್ದಾರರು ವಾಸ್ತವ್ಯ ನಡೆಸಲಿದ್ದಾರೆ.
ಸಿರುಗುಪ್ಪ ತಾಲೂಕಿನ ಸಿರುಗುಪ್ಪ ಹೋಬಳಿಯ ಕರ್ಚಿಗನೂರು ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕುರುಗೋಡು ತಾಲೂಕಿನ ಕೋಳೂರು ಹೋಬಳಿಯ ದಮ್ಮೂರು ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಂಡೂರು ತಾಲೂಕಿನ ಸಂಡೂರು ಹೋಬಳಿಯ ಕಮತೂರು ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಂಪ್ಲಿ ತಾಲೂಕಿನ ಕಂಪ್ಲಿ ಹೋಬಳಿಯ ಹಿರೇಜಾಯಿಗನೂರು ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ಅಧಿಕಾರಿಗಳು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಆಯಾ ಗ್ರಾಮಗಳಲ್ಲಿ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ.