BP NEWS: ಬಳ್ಳಾರಿ: ಡಿಸೆಂಬರ್.23: ಜಿಲ್ಲಾ ಪಂಚಾಯಿತಿ ವತಿಯಿಂದ ತಾಲ್ಲೂಕಿನ ಎಂ.ಗೋನಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಂಧವಾಳ ಗ್ರಾಮದಲ್ಲಿ ಅಮೃತ ಸರೋವರ ಕೆರೆಯ ದಡದ ಮೇಲೆ ರಾಷ್ಟ್ರೀಯ ರೈತರ ದಿನ (ಕಿಸಾನ್ ದಿವಸ್) ಆಚರಣೆ ನಿಮಿತ್ತ ಸಂವಾದ ಕಾರ್ಯಕ್ರಮ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಿಂಗಮೂರ್ತಿ ಅವರು ಕೆರೆಯ ಅಂಗಳದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮುಂದಿನ ಆರ್ಥಿಕ ವರ್ಷದಿಂದ ಜಲ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರೈತರಿಗೆ ತಿಳಿಯಪಡಿಸಲು ಹಾಗೂ ಅಮೃತ ಸರೋವರ ಕಾಮಗಾರಿಗಳ ವೇಗವನ್ನು ಹೆಚ್ಚಿಸಲು ಕಿಸಾನ್ ದಿನಾಚರಣೆಯ ನಿಮಿತ್ತ “ಜಲ ಸಂಜೀವಿನಿ-ರೈತ ಸಂವಾದ” (ನಮ್ಮ ನಡಿಗೆ ಅನ್ನದಾತರ ಕಡೆಗೆ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ನಂತರದಲ್ಲಿ ಅಮೃತ ಸರೋವರ ಅನುಷ್ಠಾನ ಪರಿವೀಕ್ಷಣೆ ಹಾಗೂ ಜಲ ಸಂಜೀವಿನಿ ಕಾರ್ಯಕ್ರಮದ ಅನುಷ್ಠಾನದ ಮಹತ್ವ ಕುರಿತು ಮಾಹಿತಿ ವಿನಿಮಯ ಸ್ಥಳೀಯ ಜನರೊಂದಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಎಂ.ಗೋನಾಳ್ ಗ್ರಾಪಂನ ಸಮಗ್ರ ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆಯಲ್ಲಿ ಸಾಧನೆಗೈದ ಐದು ಜನ ಪ್ರಗತಿಪರ ರೈತರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾ.ಪಂ ಮಟ್ಟದ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಮತ್ತು ಅನುμÁ್ಠನ ಇಲಾಖೆಗಳಾದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.