ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳಿಗೆ ಚಾಲನೆ

0
111

BP NEWS: ಬಳ್ಳಾರಿ: ಜನೇವರಿ.12: ಸರ್ಕಾರಿ ನೌಕರರು ಜೀವನದ ಒತ್ತಡದ ಮಧ್ಯೆಯೂ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ. ಇಂತಹ ಕ್ರೀಡಾಕೂಟಗಳು ನೌಕರರ ದೈಹಿಕ ಸಾಮಥ್ರ್ಯ ವೃದ್ಧಿಗೆ ಹಾಗೂ ಇತರೆ ನೌಕರರೊಂದಿಗೆ ಸ್ನೇಹ ಸಂಬಂಧ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಬಳ್ಳಾರಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಸ್ಪರ್ಧೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಈಗ ನಡೆಯುತ್ತಿರುವ ಕ್ರೀಡಾಕೂಟಗಳಲ್ಲಿ ವಿಜೇತರಾದವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ. ಮಾರ್ಚ್ ತಿಂಗಳಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಗಳು ನಡೆಯಲಿದ್ದು, ಎಲ್ಲಾರೂ ಕ್ರೀಡಾಕೂಟಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿ ಹೆಚ್ಚಿನ ಪ್ರಶಸ್ತಿಗಳನ್ನು ಪಡೆದು ವಿಜೇತರಾಗುವ ಮೂಲಕ ಬಳ್ಳಾರಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕಾರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹರಿಸಿಂಗ್ ರಾಥೋಡ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ತಾಲೂಕು ಪದಾಧಿಕಾರಿಗಳು, ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here