ಜಿಲ್ಲಾ ಉಸ್ತುವಾರಿ ಸಚಿವರಿಂದ ಬಳ್ಳಾರಿ ಉತ್ಸವ ಆಹ್ವಾನ ಪತ್ರಿಕೆ ಬಿಡುಗಡೆ

0
108

BP NEWS: ಬಳ್ಳಾರಿ: ಜನೇವರಿ.14: ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ಪ್ರಥಮ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದ ಆಹ್ವಾನ ಪತ್ರಿಕೆಗಳನ್ನು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಜ.21ರಂದು ಬಳ್ಳಾರಿ ಉತ್ಸವದಂದು ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಕೆರೆಯ ಪಕ್ಕದಲ್ಲಿ 23 ಅಡಿ ಎತ್ತರದ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅವರ ಪುತ್ಥಳಿ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here