BP NEWS: ಬಳ್ಳಾರಿ: ಜನೇವರಿ.15: ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯೋತ್ಸವವನ್ನು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನ ಸಭಾಂಗಣದಲ್ಲಿ ಆಚರಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರಾದ ಎಂ.ರಾಜೇಶ್ವರಿ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ಧರಾಮ ಅವರು ವಚನ, ಸ್ವರವಚನ, ಬಸವಸ್ತೋತ್ರದ ತ್ರಿವಿಧಿ, ಅμÁ್ಟವರಣ ಸ್ತೋತ್ರದ ತ್ರಿವಿಧಿ, ಸಂಕೀರ್ಣ ತ್ರಿವಿಧಿ ಮುಂತಾದ ವೈವಿಧ್ಯಮಯ ಸಾಹಿತ್ಯದ ಸೃಷ್ಟಿಕರ್ತರು. ವಚನ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಷತ್ತಿನ ಜಿಲ್ಲಾಧ್ಯಕ್ಷರಾದ ನಿಷ್ಟಿ ರುದ್ರಪ್ಪ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ ಸೇರಿದಂತೆ ಸಮಾಜದ ಮುಖಂಡರುಗಳು ಹಾಗೂ ಇನ್ನೀತರರು ಇದ್ದರು.