ಉಸ್ತುವಾರಿ ಸಚಿವರಿಂದ ಹಂಪಿ ಉತ್ಸವ ಸಿದ್ಧತೆಗಳ ಪರಿಶೀಲನೆ

0
113

BP NEWS: ಹೊಸಪೇಟೆ(ವಿಜಯನಗರ): ಜನೇವರಿ.17: ಜನವರಿ 27 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದ ಲೋಗೋ ಜ.20 ರಂದು ಬಿಡಗಡೆಗೊಳಿಸಲಾಗುವುದು ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು ವಕ್ಪ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದರು.
ಮಂಗಳವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಹಂಪಿ ಉತ್ಸವದ ಪೂರ್ವ ಸಿದ್ಧತೆಗಳ ಸಭೆಯನ್ನು ನಡೆಸಿದ ಉಸ್ತುವಾರಿ ಸಚಿವರು ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು. ಹಂಪಿ ಉತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ. ದಸರಾ ನಂತರ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರುವ ಉತ್ಸವವಾಗಿದೆ. ಈ ಉತ್ಸವಕ್ಕೆ ಜಿಲ್ಲಾಡಳಿತ ಸಿದ್ದತೆಗಳನ್ನು ಚುರುಕುಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.


ಲಕ್ಷಾಂತರ ಜನರನ್ನ ಸೆಳೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು. ಈ ಹಿನ್ನಲೆಯಲ್ಲಿ ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಗಣ್ಯವ್ಯಕ್ತಿಗಳು ಹಾಗೂ ಕಲಾವಿದರ ಪಟ್ಟಿಯನ್ನು ಶೀಘ್ರವಾಗಿ ಅಂತಿಮಗೊಳಿಸಲು ಸೂಚನೆ ನೀಡಿದರು.
ಈಗಾಗಲೇ ಹಂಪಿ ಉತ್ಸವದ ಲೋಗೋ ಸಿದ್ದಗೊಂಡಿದ್ದು, ಈ ಲೋಗೋವನ್ನ ಮುಖ್ಯಮಂತ್ರಿಗಳಿಂದ ಬಿಡುಗಡೆಗೊಳಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಭೋಯರ್ ನಾರಾಯಣ್‍ರಾವ್, ಜಿಲ್ಲಾ ಪೋಲೀಸ್ ವರಿಷ್ಠಾ ಧಿಕಾರಿ ಹರಿಬಾಬು ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here