ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

0
190

BP NEWS: ಚೆನ್ನೈ: ಫೆಬ್ರವರಿ.04: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ ನಿಧನಕ್ಕೆ ಚಿತ್ರರಂಗ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ  ಚೆನ್ನೈ ಹಡ್ಡೊಸ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ತಲೆ ಹಾಗೂ ಮುಖಕ್ಕೆ ತೀವ್ರವಾಗಿ ಗಾಯವಾಗಿದೆ. ಇದೇ ಗಾಯದಿಂದ ವಾಣಿ ಜಯರಾಂ ಮೃತಪಟ್ಟಿರುವ ಸಾಧ್ಯತೆ ಇದೆ. ಇನ್ನು ತಲೆಗೆ ತೀವ್ರ ಗಾಯವಾಗಿರುವುದು ಹೇಗೆ ಅನ್ನೋ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಈ ಕುರಿತು ವಾಣಿ ಜಯರಾಂ ಮನೆ ಕೆಲಸದವರ ಹೇಳಿಕೆಯನ್ನು ಪಡೆದಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. 2018ರಲ್ಲಿ ಪತಿ  ಹಾಗೂ ಉದ್ಯಮಿ ಜಯರಾಂ ನಿಧನರಾಗಿದ್ದರು.  ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿದ್ದಾರೆ. ತಮಿಳಿನಲ್ಲಿ ‘ಅಪೂರ್ವ ರಾಗಂಗಳ್’, ‘ತೆಲುಗಿನಲ್ಲಿ ಶಂಕರಾಭರಣಂ’, ‘ಸ್ವಾತಿ ಕಿರಣಂ’ ಚಿತ್ರಗಳಲ್ಲಿನ ಹಿನ್ನಲೆ ಗಾಯನಕ್ಕೆ ಈ ಗಾಯಕಿಗೆ ರಾಷ್ಟ್ರಪ್ರಶಸ್ತಿ, ಹಲವು ರಾಜ್ಯಗಳ ಶ್ರೇಷ್ಠ ಗಾಯಕಿ ಪ್ರಶಸ್ತಿ, ಸಂಗೀತ ಸಮ್ಮಾನ್,  ಹಿಂದಿ ಭಾಷೆಯನ್ನೊಳಗೊಂಡಂತೆ ಹಲವು ಭಾಷೆಗಳ ಚಿತ್ರಗಳ ಗಾಯನಕ್ಕಾಗಿ ಫಿಲಂ ಫೇರ್ ಪ್ರಶಸ್ತಿ, ಪದ್ಮಭೂಷಣ ಹೀಗೆ ಹಲವು ಪುರಸ್ಕಾರಗಳು ವಾಣಿ ಜಯರಾಂ ಸಂದಿವೆ. ಈ ಪ್ರಶಸ್ತಿಗಳಲ್ಲಿ ಗುಜರಾಥ್, ಒರಿಸ್ಸಾ ರಾಜ್ಯಗಳ ಪ್ರಶಸ್ತಿಗಳೂ ಸೇರಿವೆ ಎಂದರೆ ವಾಣಿ ಜಯರಾಂ ಅವರಿಗಿರುವ ವ್ಯಾಪ್ತಿಯ ಅರಿವಾಗುತ್ತದೆ.

LEAVE A REPLY

Please enter your comment!
Please enter your name here