ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಸಂತ ಸೇವಾಲಾಲ್ ಜಯಂತಿ

0
172

BP NEWS: ಬಳ್ಳಾರಿ: ಫೆಬ್ರವರಿ.15: ಸೇವಾಲಾಲ್‍ರು ತಮ್ಮ ಧನಾತ್ಮಕ ಚಿಂತನೆಗಳಿಂದ ತಮ್ಮ ಸಮುದಾಯದಲ್ಲಿನ ಜನರಿಗೆ ಜಾಗೃತಿಯನ್ನು ಮೂಡಿಸುತ್ತಿದ್ದ ಮಹಾನ್ ಸಂತ ಹಾಗೂ ಸಮಾಜ ಸೇವಕರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 284 ನೇ ಶ್ರೀ ಸಂತ ಸೇವಾಲಾಲ್ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದಲ್ಲಿನ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು. ಮೌಢ್ಯ-ಕಂದಾಚಾರಗಳಿಗೆ ಬಲಿಯಾಗಬಾರದು ಎಂದು ಸೇವಾಲಾಲ್‍ರು ಕರೆ ನೀಡಿದ್ದರು. ಈಗಿನ ಪೀಳಿಗೆಯವರು ಅವರ ತತ್ವಾದರ್ಶಗಳನ್ನು ಆಳವಡಿಸಿಕೊಳ್ಳಬೇಕು ಎಂದು ಮಂಜುನಾಥ ಅವರು ಹೇಳಿದರು.
ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಡಾ.ಗುರುನಾಥ ಬಿ.ಚೌವ್ಹಾಣ್ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ರಾಜಸ್ತಾನದ ಪರಮ ಪೂಜ್ಯ ಶ್ರೀ ಚೇತನಗಿರಿ ಮಹಾರಾಜ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಮಹನೀಯರಿಗೆ ಸನ್ಮಾನಿಸಲಾಯಿತು.
ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಸಂತ ಶ್ರೀ ಸೇವಾಲಾಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
ಮೆರವಣಿಗೆಯು ಮುನಿಸಿಪಲ್ ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದಿಂದ ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಮೂಲಕ ವಾಲ್ಮೀಕಿ ಭವನದವರೆಗೆ ತಲುಪಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್‍ಬಾಬು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶಾಷು ಮೊಹದ್ದಿನ್, ಜಿಲ್ಲಾ ಸೇವಾಲಾಲ್ ಸಂಘದ ಅಧ್ಯಕ್ಷ ರಾಮುನಾಯ್ಕ, ಅಖಿಲ ರಾಜ್ಯ ಬಂಜಾರ ಸೇನೆ ಸಂಘದ ಅಧ್ಯಕ್ಷ ಚಂದ್ರನಾಯ್ಕ, ಸಮಾಜದ ಹಿರಿಯ ವಕೀಲ ಗೋವಿಂದ ನಾಯ್ಕ ಸೇರಿದಂತೆ ಸಮಾಜದ ಹಿರಿಯ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here