BP NEWS: ಬಳ್ಳಾರಿ: ಮೇ.30: 2023-24ನೇ ಸಾಲಿನ ಶೈಕ್ಷಣಿಕ ವರ್ಷ ಇದೇ ತಿಂಗಳು ಮೇ 29 ರಿಂದ ಪ್ರಾರಂಭವಾಗಿದ್ದು, ದಾಖಲಾತಿ ಜೂನ್ 01 ರಿಂದ ಆರಂಭವಾಗಲಿದೆ. ಪಾಲಕ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಗುರುಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕ ಕಂಪ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಹೆಚ್ ದೊಡ್ಡ ಬಸಪ್ಪ ಅವರು ಮನವಿ ಮಾಡಿದ್ದಾರೆ.
ಮಕ್ಕಳನ್ನು ಶಾಲೆಗೆ ಸೇರಿಸುವುದರಿಂದ ಉಚಿತ ಪ್ರವೇಶ ಮತ್ತು ಉಚಿತ ಶಿಕ್ಷಣ, ಪಠ್ಯ ಪುಸ್ತಕ ದೊರೆಯಲಿದೆ. ತರಬೇತಿ ಪಡೆದ ಅನುಭವ ಶಿಕ್ಷಕರಿಂದ ಭೋದನೆ, ಉಚಿತ ಎರಡು ಜೊತೆ ಸಮವಸ್ತ್ರ, ಮಧ್ಯಾಹ್ನ ಬಿಸಿಯೂಟ ಯೋಜನೆ, ವಾರದಲ್ಲಿ 5 ದಿನ ಕೆನೆ ಭರಿತ ಹಾಲು, ಮಕ್ಕಳ ಅಪೌಷ್ಟಿಕತೆ ಕಡಿಮೆ ಮಾಡಲು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗತ್ತದೆ ಎಂದು ಅವರು ಪೋಷಕರಿಗೆ ತಿಳಿಸಿದ್ದಾರೆ.
ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್, ಮಕ್ಕಳ ಕಲೆ ಪ್ರೊತ್ಸಾಹಿಸಲು ಸಾಂಸ್ಕøತಿಕ ಕಾರ್ಯಕ್ರಮಗಳು, ಮಕ್ಕಳು ದೈಹಿಕವಾಗಿ ದೃಢವಾಗಿರಲು ಕ್ರೀಡೆಗಳು, ಪ್ರತಿಭಾ ಕಾರಂಜಿ, ಗ್ರಂಥಾಲಯ, ಪ್ರಯೋಗಾಲಯ, ಇಂಗ್ಲೀμï ಮತ್ತು ಕನ್ನಡ ಮಾಧ್ಯಮದಲ್ಲಿ ಮಕ್ಕಳಿಗೆ ಸಹ್ಯವಾಗುವ ರೀತಿಯಲ್ಲಿ ಅಕ್ಷರಾಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಮೂಡುವಂತೆ ಪ್ರೇರೇಪಿಸಲಾಗುತ್ತದೆ.
ಸರ್ಕಾರಿ ಶಾಲೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗಳಿಗೆ ದಾಖಲಿಸಿರಿ. ಸರ್ಕಾರಿ ಶಾಲೆಗಳನ್ನು ಉಳಿಸಿರಿ ಎಂದು ಅವರು ಮನವಿ ಮಾಡಿದ್ದಾರೆ.