ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ, ಸಿಹಿ ನೀಡಿ ಸ್ವಾಗತಿಸಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

0
196

BP NEWS: ಬಳ್ಳಾರಿ: ಮೇ.31:
ರಾಜ್ಯಾದಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಬೇಸಿಗೆ ರಜೆ ಮುಗಿಸಿ ಮತ್ತೆ ಶಾಲೆಗೆ ಬರುತ್ತಿದ್ದಾರೆ. ಬಳ್ಳಾರಿ ನಗರದ ಹವಂಭಾವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಭಾಗವಹಿಸಿ ಪ್ರೀತಿ ಪೂರ್ವಕವಾಗಿ ಮಕ್ಕಳಿಗೆ ಶುಭಕೋರಿ ಆಹ್ವಾನಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ ಪಶ್ಚಿಮ ವಲಯ ಕುರುಗೋಡು ಇವರ ಸಂಯುಕ್ತಾಶ್ರಯದಲ್ಲಿ “ಗುಣಾತ್ಮಕ ಶೈಕ್ಷಣಿಕ ವರ್ಷ 2023-24” ರ ಅಂಗವಾಗಿ ಬುಧವಾರದಂದು ಜಿಲ್ಲಾ, ತಾಲೂಕು, ಶಾಲಾ ಮಟ್ಟದ ‘ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳು ಕನ್ನಡ ಭಾಷೆಯ ಜೊತೆಗೆ ಇಂಗ್ಲೀμï ಸಮರ್ಪಕವಾಗಿ ಓದುವ ಸಾಮಥ್ರ್ಯ ಗಳಿಸಬೇಕು. ಆಟೋಟ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿಬೇಕು. ಎಲ್ಲಾ ಮಕ್ಕಳು ಪ್ರತಿದಿನ ಶೂ ಮತ್ತು ಸಾಕ್ಸ್ ಧರಿಸಿ ಶಿಸ್ತಾಗಿ ಬರಬೇಕು ಎಂದರು.
ಇಂದು ಗೈರು ಹಾಜರಾದ ಎಲ್ಲಾ ಮಕ್ಕಳನ್ನು ಶಾಲೆಗೆ ಒಂದು ವಾರದೊಳಗಾಗಿ ಕಡ್ಡಾಯವಾಗಿ ಶಾಲೆಗೆ ಕರೆತರಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಶಾಲೆಯ ಮೂಲಭೂತ ಸೌಕರ್ಯಗಳ ಮೆಚ್ಚುಗೆ ವ್ಯಕ್ತಪಡಿಸುತ್ತಾ ಖಾಸಗಿ ಶಾಲೆಗೆ ಸರಿ ಸಮನಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಸಿಹಿ ಕೂಡ ನೀಡಿದರು.


ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಿಂಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ಎಂ.ವಡಗೇರಿ, ಪಶ್ಚಿಮ ವಲಯ ಕುರುಗೋಡು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಸದಸ್ಯೆ ಕಲ್ಪನಾ ವೆಂಕಟರಮಣರೆಡ್ದಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here