BP NEWS: ಬಳ್ಳಾರಿ: ಜೂನ್.01:
ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ, ಸರ್ವೇಕ್ಷಣಾ ಘಟಕ ಹಾಗೂ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ತಂಬಾಕು ದಿನಾಚರಣೆ’ ಅಂಗವಾಗಿ ‘ನಮಗೆ ಆಹಾರ ಬೇಕು ತಂಬಾಕು ಅಲ್ಲ’ ಎಂಬ ಘೋಷ ವಾಕ್ಯದೊಂದಿಗೆ ಜನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಭಾಗವಹಿಸಿ ರೂಪನಗುಡಿ ಗ್ರಾಮದ ಬೀದಿ ಬೀದಿಗಳಲ್ಲಿ ಘೋಷಣೆ ಕೂಗುತ್ತಾ ತಂಬಾಕು ಸೇವನೆ ಮಾಡುವವರಿಗೆ ಗುಲಾಬಿ ಹೂ ನೀಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಜನ ಜಾಗೃತಿ ಜಾಥಾದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಿತ್ರಾ ವರ್ಣೇಕರ್ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.