BP NEWS: ಲಿಂಗಸುೂರು: ಜೂನ.05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾವಿನಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನೆಟ್ಟು, ವಿದ್ಯಾರ್ಥಿಗಳಿಗೆ ತಲಾ ಒಂದು ಸಸಿ ಉಚಿತವಾಗಿ ವಿತರಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಅವರು ಬೇವು ಅರಳಿ ಕರಿಬೇವು ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ವಿತರಿಸಿ, ತಮ್ಮ ತಮ್ಮ ಮನೆಗಳಲ್ಲಿ ನೆಟ್ಟು, ಘೋಷಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅರಣ್ಯ ನಾಶವೇ ಪರಿಸರ ಹಾಳಾಗಲು ಕಾರಣವಾಗಿದೆ. ಮರ ಗಿಡಗಳ ಸಂಖ್ಯೆ ಕಡಿಮೆಯಾಗಿರುವ ಕಾರಣ ಸರಿಯಾದ ಸಮಯಕ್ಕೆ ಮಳೆ ಬರುತ್ತಿಲ್ಲ.ಪ್ರಾಣಿ, ಪಕ್ಷಿಗಳ ಸಂತತಿಯು ನಶಿಸಿ ಹೋಗುತ್ತಿದೆ ಎಂದು ಹೇಳಿದರು. ಪರಿಸರ ಉಳಿದರೆ ಮಾತ್ರ ಮಾನವನಿಗೆ ಉಳಿಗಾಲ ಇದೆ. ಪ್ರತಿಯೊಬ್ಬರೂ ಸಸಿ ನೆಟ್ಟುಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ್ ಮಕ್ಕಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಸೋಮನಗೌಡ ಪಾಟೀಲ್ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಿಡಿಓ ಗೀತಾ ಪತ್ತಾರ, ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗ, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.