BP NEWS: ಬಳ್ಳಾರಿ: ಜೂನ್.17:
ಕೇಂದ್ರ ಆಯುಷ್ ಮಂತ್ರಾಲಯ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ಬಳ್ಳಾರಿಯ ಸಮಸ್ತ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂ.21 ರಂದು ಬೆಳಗ್ಗೆ 6.15 ಕ್ಕೆ ನಗರದ ಕಪ್ಪಗಲ್ ರಸ್ತೆಯ ಶೆಟ್ಟರ ಗುರುಶಾಂತಪ್ಪ ಪದವಿಪೂರ್ವ ಕಾಲೇಜು(ಲಾ ಕಾಲೇಜು ಮೈದಾನ) ಆವರಣದಲ್ಲಿ “ವಸುದೈವ ಕುಟುಂಬಕ್ಕಾಗಿ ಯೋಗ ಹಾಗೂ ಪ್ರತಿ ಮನೆ ಅಂಗಳದಲ್ಲಿ ಯೋಗ” ಎಂಬ ಘೋಷವಾಕ್ಯದೊಂದಿಗೆ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಯುವಜನ ಸೇವಾ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ.ನಾಗರಾಜ್, ಜೆ.ಎನ್.ಗಣೇಶ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಸೇರಿದಂತೆ ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆಯುಷ್ ಇಲಾಖೆ ಆಯುಕ್ತರಾದ ಜೆ.ಮಂಜುನಾಥ, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತಾ ಪಾಟೀಲ್, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್.ರಾಮನಗೌಡ, ಸಂಘದ ಕಾರ್ಯದರ್ಶಿ ಹೆಚ್.ಎಂ.ಗುರುಸಿದ್ಧಸ್ವಾಮಿ ಸೇರಿದಂತೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಎ.ಎಫ್.ಐ, ನೀಮ ಖಾಸಗಿ ಸಂಸ್ಥೆಯ ಆಯುಷ್ ವೈದ್ಯರು ಮತ್ತು ಜಿಲ್ಲೆಯ ಸಮಸ್ತ ಯೋಗ ಸಂಸ್ಥೆಗಳು ಉಪಸ್ಥಿತರಿರಲಿದ್ದಾರೆ.
ಪತಂಜಲಿ ಯೋಗ ಸಮಿತಿಯ ರಾಜ್ಯ ಸಮಿತಿ ಸದಸ್ಯರು ಮತ್ತು ಜಿಲ್ಲಾ ಸಂಯೋಜಕರಾದ ಇಸ್ವಿ ಪಂಪಾಪತಿ ಅವರು ಯೋಗ ಶಿಬಿರ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.