ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ

0
92

BP NEWS: ಬಳ್ಳಾರಿ: ಜೂನ್.27:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕøತಿಕ ಇಲಾಖೆಯ ಹೊಂಗಿರಣದ ಸಾಂಸ್ಕøತಿಕ ಸಮುಚ್ಛಯ ಆವರಣದಲ್ಲಿ ಮಂಗಳವಾರ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಬಾಬು ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here