ಮಣಿಪುರದ ಮುಖ್ಯಮಂತ್ರಿಯನ್ನ ವಜಾಗೊಳಿಸಿ:ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ

0
158

BP NEWS: ಬಳ್ಳಾರಿ: ಜುಲೈ.27: ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ,ಕರ್ನಾಟಕ ದಲಿತ ಸಂಗರ್ಷ ಸಮಿತಿಯು ಗುರುವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಸಂಚಾಲಕರಾದ, ಜಿ ಗೋವರ್ಧನ ಮಾತನಾಡಿ ,ಮಣಿಪುರದಲ್ಲಿ 2023 ಮೇ, 4 ರಂದು ಕುಕಿ ಜೋ ಬುಡಕಟ್ಟು ಸಮುದಯದ ಮಹಿಳೆಯರನ್ನು ಸಂಪೂರ್ಣ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಆತ್ಯಾಚಾರ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಗಲ್ಲು ಶಿಕ್ಷೆಗೊಳಪಡಿಸಬೇಕು.ಸುಮಾರು 3 ತಿಂಗಳುಗಳಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಮಣಿಪುರ ಬೀರೇನ್ ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟ್ರಪತಿಯವರ ಆಡಳಿತವನ್ನು ಜಾರಿ ಮಾಡಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್,ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಪಿ ಜಗದೀಶ್ವರರೆಡ್ಡಿ, ಎಸ್ ವಿಘ್ನೇಶ್, ಗೋವರ್ಧನ ಜಿಲ್ಲಾ ಸಂಘಟನಾ ಸಂಚಾಲಕರಾದ ನಟರಾಜ, ವೀರಭದ್ರಪ್ಪ, ಫೋಟೋರಾಜ, ಮುರಳಿ, ಗುರುದೇವ, ಹೊನ್ನೇಶ್, ಕುಮಾರಸ್ವಾಮಿ, ಸೋಮಪ್ಪ, ದೇವಿನಗರ ಶೀನ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕರಾದ ಅರುಣ್ ಕುಮಾರ್, ಪ್ರಹ್ಲಾದ್, ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here