ಸ್ವಯಂ ಉದ್ಯೋಗ ಹೊಂದಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0
61

BP NEWS: ಬಳ್ಳಾರಿ: ಆಗಸ್ಟ್.19:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿನ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧೀಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ರಾಜ್ಯದ ಕ್ರೀಡಾಪಟುಗಳು ತಮ್ಮ ವಿವರಗಳನ್ನು ನಿಗಧಿತ ನಮೂನೆಯ ಅರ್ಜಿಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ಆಯಾ ಜಿಲ್ಲೆಯ ತರಬೇತುದಾರರಿಗೆ ಸಲ್ಲಿಸಬೇಕು. ಕ್ರೀಡಾಪಟುಗಳು ಸಲ್ಲಿಸಿರುವ ಪ್ರಮಾಣ ಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here