ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಗತಿಗಳ ಕಾರ್ಯಕ್ರಮಕ್ಕೆ ಚಾಲನೆ

0
122

BP NEWS: ಬಳ್ಳಾರಿ: ಆಗಸ್ಟ್.22:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಪೂರ್ವಸಿದ್ಧತೆ ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್.ಎನ್ ಅವರು ಹೇಳಿದರು.
ನಗರದ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಇತಿಹಾಸ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಗತಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಇವತ್ತಿನ ಬದಲಾದ ಕಾಲಘಟ್ಟದಲ್ಲಿ ಸ್ಪರ್ಧಾತ್ಮಕತೆ ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಹುಟ್ಟಿನಿಂದ ಯಾರು ಜ್ಞಾನಿಯಾಗಿರುವುದಿಲ್ಲ. ಸತತ ಪ್ರಯತ್ನದ ಮೂಲಕ ಯಶಸ್ಸು ಸಾಧಿಸಬಹುದಾಗಿದೆ ಎಂದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕಗಳನ್ನು ಹೆಚ್ಚಾಗಿ ಓದುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಸಾಹೇಬ್ ಅಲಿ ಹೆಚ್ ನಿರಗುಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಧನೆಗೆ ಅಸಾಧ್ಯವಾದ್ದು ಯಾವುದು ಇಲ್ಲ. ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡುವ ಮೂಲಕ ಸಾಧಿಸಬಹುದಾಗಿದೆ ಎಂದು ಕಿವಿಮಾತು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.


ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ್, ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥರಾದ ಡಾ.ಅನಂತ.ಎಲ್ ಝಂಡೇಕರ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ, ಸಹಾಯಕ ಪ್ರಾಧ್ಯಾಪಕರಾದ ಸಂತೋಷಕುಮಾರ, ಮಹ್ಮದ ಸಾಧಿಕ, ನಾಗರಾಜ.ಎಚ್, ಓಂಕಾರಸ್ವಾಮಿ ಸೇರಿದಂತೆವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here