BP NEWS: ಬಳ್ಳಾರಿ: ಆಗಸ್ಟ್.28:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ಮಂಡಳಿಯು ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮಾಡಿರುವ ಹಾಗೂ ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುತ್ತದೆ. ಮಂಡಳಿಯು ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲಂಘನೆ ಮಾಡುವವರಿಗೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮಾಡಿದ ಹಾಗೂ ಬಣ್ಣ ಲೇಪಿತವಾದ ಗಣೇಶ ವಿಗ್ರಹಗಳು ಮತ್ತು ಮೂರ್ತಿಗಳನ್ನು ತಯಾರಿಸುವಿಕೆ ಮತ್ತು ಮಾರಾಟ ಮಾಡುವಂತಿಲ್ಲ.
ಅನಧಿಕೃತವಾಗಿ ತಯಾರಿ, ಮಾರಾಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಂಚಾಯತಿ, ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.