ಸೆ.03ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ ಕುಮಾರ್ ಮಿಶ್ರಾ ಆದೇಶ

0
78

BP NEWS: ಬಳ್ಳಾರಿ: ಆಗಸ್ಟ್.29:
ಜಿಲ್ಲೆಯಲ್ಲಿ ಸೆಪ್ಟೆಂಬರ್ 03 ರಂದು ಕರ್ನಾಟಕ ಶಿಕ್ಷಕರ ಅರ್ಹಾತ ಪರೀಕ್ಷೆ (ಕೆಎಆರ್‍ಟಿಇಟಿ-2023) ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 4.30 ರವರೆಗೆ ನಗರದ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚಲು ಷರತ್ತಿಗೊಳಪಟ್ಟು ಆದೇಶಿಸಿದೆ ಹಾಗೂ ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳನ್ನು ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here